Cyclone Fengal | ಚಂಡಮಾರುತಕ್ಕೆ ಮೂವರು ಬಲಿ – 100ಕ್ಕೂ ಹೆಚ್ಚು ಮಂದಿ ರಕ್ಷಣೆ

Public TV
3 Min Read
Cyclone Fengal
ಸಾಂದರ್ಭಿಕ ಚಿತ್ರ

– 500ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
– ವಿಮಾನ, ರೈಲು ಸಂಚಾರದಲ್ಲಿ ವಿಳಂಬ

ಚೆನ್ನೈ: ತಮಿಳುನಾಡಿಗೆ (Tamil Nadu) ಅಪ್ಪಳಿಸಿರುವ ಫೆಂಗಲ್‌ ಚಂಡಮಾರುತ ಹಲವು ಅವಾಂತರಗಳನ್ನ ತಂದೊಡ್ಡಿದೆ. 90 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಚೆನ್ನೈ ಮತ್ತು ಇತರ ಪ್ರದೇಶಗಳಲ್ಲಿ ಭಾರಿ ಮಳೆ ಉಂಟಾಗಿದೆ, ಇದರಿಂದ ಹಲವು ಪ್ರದೇಶಗಳಲ್ಲಿ ಜಲಾವೃತ ಉಂಟಾಗಿದೆ. ಅಲ್ಲದೇ ವಿಮಾನ, ರೈಲು, ಬಸ್‌ ಸೇರಿದಂತೆ ಸಾರ್ವಜನಿಕ ಸಂಚಾರ ವ್ಯವಸ್ಥೆಯ ಮೇಲೆ ಪರಿಣಾಮ ಉಂಟುಮಾಡಿದೆ. ಚೆನ್ನೈ ಏರ್‌ಪೋರ್ಟ್‌ನಲ್ಲಿ (Chennai Airport) ವಿಮಾನವೊಂದು ಲ್ಯಾಂಡಿಂಗ್‌ಗಾಗಿ ಪರದಾಡಿದ ಪ್ರಸಂಗವೂ ಕಂಡುಬಂದಿದೆ.

ಚೆನ್ನೈನಲ್ಲಿ ಸಂಭವಿಸಿದ ಮಳೆಯಿಂದಾಗಿ ವಿವಿಧೆಡೆ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ಮೂವರಲ್ಲಿ ಓರ್ವ ವಲಸೆ ಕಾರ್ಮಿಕ ಮತ್ತೊಬ್ಬರು ಎಟಿಎಂನಿಂದ (ATM) ಹಣ ಡ್ರಾ ಮಾಡಲು ಹೋದಾಗ, ಮತ್ತೊಬ್ಬರು ಹೆಣವಾಗಿ ತೇಲುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: ‌ಭಾರತದಲ್ಲಿ ಬ್ರಿಟಿಷರ ಆಡಳಿತ ವಿರೋಧಿಸಿದ ಕೀರ್ತಿ ಟಿಪ್ಪುವಿನದ್ದು: ವಿದೇಶಾಂಗ ಸಚಿವ ಜೈಶಂಕರ್

ಎಲ್ಲೆಲ್ಲಿ ಎಷ್ಟು ಮಳೆ?
ಕೇಂದ್ರಾಡಳಿತ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ 8.30ರಿಂದ ಸಂಜೆ 6ರ ವರೆಗೆ ಸುಮಾರು 10 ಸೆಂ.ಮೀ ಮಳೆ ದಾಖಲಾಗಿದೆ. ಇನ್ನೂ ಪ್ರದೇಶವಾರು ನೋಡುವುದಾದರೆ ವಿಲ್ಲುಪುರಂ – ಮೈಲಾಮ್‌ನಲ್ಲಿ 498 ಎಂ.ಎಂ, ಪಾಂಡೀಚೇರಿ – 469 ಎಂಎಂ, ಕೂಡ್ಲೂರೆ – 179 ಎಂಎಂ, ತಿರುವಣ್ಣಾಮಲೈ – ತಿರುವಣ್ಣಾಮಲೈ ಇಸ್ರೋ – 176 ಎಂಎಂ, ತಿರುವಣ್ಣಾಮಲೈ – ಚೆಯ್ಯರ್ – 160 ಎಂಎಂ, ತಿರುವಳ್ಳುವರ್ – ಆರ್‌ಕೆ ಪೇಟೆ – 124 ಎಂಎಂ, ತಿರುವಳ್ಳುವರ್ – ಕೊಲ್ಲಪಕ್ಕಂ – 120 ಎಂಎಂ ಮಳೆಯಾಗಿದೆ. ಇದನ್ನೂ ಓದಿ: ಕೇಜ್ರಿವಾಲ್‌ ಮೇಲೆ ನಿಗೂಢ ದ್ರವ ಎಸೆತ – ದಾಳಿ ಹಿಂದೆ ಬಿಜೆಪಿ ಕೈವಾಡ ಎಂದು ಆರೋಪ

100ಕ್ಕೂ ಅಧಿಕ ಜನರ ರಕ್ಷಣೆ:
ಮಳೆಯ ಅವಾಂತರದಿಂದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪುದುಚೇರಿಯ ಕೃಷ್ಣನಗರದ ಕೆಲವು ಪ್ರದೇಶಗಳಲ್ಲಿ 5 ಅಡಿಗಳಷ್ಟು ಎತ್ತರಕ್ಕೆ ನೀರು ಹರಿಯುತ್ತಿದ್ದು, ಸುಮಾರು 500 ಮನೆಗಳು ಜಲಾವೃತವಾಗಿವೆ. ಇದರಿಂದ ಎನ್‌ಡಿಆರ್‌ಎಫ್‌ ಹಾಗೂ ಸ್ಥಳೀಯ ರಕ್ಷಣಾ ಪಡೆಗಳೊಂದಿಗೆ ಭಾರತೀಯ ಸೇನೆ ಬೀಡುಬಿಟ್ಟಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಈವರೆಗೆ ಭಾರತೀಯ ಸೇನೆ 100ಕ್ಕೂ ಹೆಚ್ಚು ಜನರನ್ನ ರಕ್ಷಣೆ ಮಾಡಿದೆ ಎಂದು ವರದಿ ಹೇಳಿದೆ.

ಸಿಎಂ, ಡಿಸಿಎಂ ಮೇಲ್ವಿಚಾರಣೆ:
ಇನ್ನೂ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್, ಅನುಷ್ಠಾನಗೊಳಿಸುತ್ತಿರುವ ಕ್ರಿಯಾ ಯೋಜನೆಯನ್ನು ಪರಿಶೀಲಿಸಿ‌, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಪ್ರವಾಹ ಪರಿಸ್ಥಿತಿಯ ನಗ್ಗೆ ಮಾಹಿತಿ ಪಡೆಯಲು ಜಿಲ್ಲಾಧಿಕಾರಿಗಳ ಉನ್ನತಮಟ್ಟದ ಸಭೆ ಕರೆಯಲಾಗಿದೆ. ಇದನ್ನೂ ಓದಿ: ಹೈಬ್ರಿಡ್ ಮಾಡೆಲ್‌ನಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಆಡಲು ಪಾಕಿಸ್ತಾನ ಒಪ್ಪಿಗೆ – ಆದ್ರೆ ಕಂಡೀಷನ್ ಅಪ್ಲೈ

Share This Article