ಚಿಕ್ಕಬಳ್ಳಾಪುರ/ಕೋಲಾರ: ಫೆಂಗಲ್ ಚಂಡಮಾರುತದ (Cyclone Fengal) ಪರಿಣಾಮ ಜಿಟಿ ಜಿಟಿ ಮಳೆಯಾಗುತ್ತಿದ್ದು, ವಿಪರೀತ ಚಳಿ ಇರುವ ಹಿನ್ನೆಲೆಯಲ್ಲಿ ಸೋಮವಾರ (ಡಿ.2 ರಂದು) ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಾಲಾ (School) ಕಾಲೇಜುಗಳಿಗೆ (College) ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಕೋಲಾರ (Kolar) ಜಿಲ್ಲೆಯಲ್ಲೂ ಸಹ ಕಳೆದ ಎರಡು ದಿನಗಳಿಂದ ನಿರಂತರ ಮಳೆ ಹಾಗೂ ಶೀತ ಗಾಳಿ ಬೀಸುತ್ತಿರುವ ಹಿನ್ನೆಲೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಸಿ ಜಿಲ್ಲಾಧಿಕಾರಿ ಅಕ್ರಂ ಪಾಷ ರಜೆ ಆದೇಶ ಹೊರಡಿಸಿದ್ದಾರೆ.
ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿ ಆದೇಶಿಸಿಸಲಾಗಿದೆ. ಈ ರಜೆಯನ್ನು ಮುಂದಿನ ದಿನಗಳ ಯಾವುದಾದರೂ ರಜೆಯ ದಿನ ತರಗತಿ ನಡೆಸುವ ಮೂಲಕ ಸರಿದೂಗಿಸುವ ಷರತ್ತಿನೊಂದಿಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.