ಬೆಂಗಳೂರು: ಕಳೆದ ಕೆಲದಿನಗಳಿಂದ ತಮಿಳುನಾಡಿನಲ್ಲಿ ಅವಾಂತರ ಸೃಷ್ಟಿಸಿದ್ದ ಗಜ ಚಂಡಮಾರುತ ಇಂದು ರಾಜ್ಯಕ್ಕೆ ಕಾಲಿಡುವ ಸಾಧ್ಯತೆ ಇದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಭಾಗದಲ್ಲಿ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಸಾಧ್ಯತೆ ಇದ್ದು, ಸಮುದ್ರ ತೀರದಲ್ಲಿ ರಕ್ಕಸಗಾತ್ರದ ಅಲೆಗಳು ಏಳುವ ಸಾಧ್ಯತೆಯಿಂದ ಮೀನುಗಾರರು ಸಮುದ್ರ ತೀರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಚಂಡಮಾರುತ ಮುಂಜಾಗೃತ ಕ್ರಮದ ಹಿನ್ನೆಲೆಯಲ್ಲಿ ರಕ್ಷಣಾ ಸಿದ್ಧತೆ ನಡೆಸಲು ಸೂಚಿಸಲಾಗಿದೆ.
Advertisement
Advertisement
ಗಜ ಚಂಡಮಾರುತ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಶುರುವಾಗಿದ್ದು, ಈಗಾಗಲೇ ವಾಯುಭಾರ ಕುಸಿತವಾಗಿದೆ. ಈ ಚಂಡಮಾರುತದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 19 ರಿಂದ 21 ರವರಗೂ ಚಂಡಮಾರುತದ ಎಫೆಕ್ಟ್ ಜೋರಾಗಿರಲಿದೆ ಎಂದು ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ. ಚಂಡಮಾರುತದ ಪ್ರಭಾವದಿಂದ ಬೆಂಗಳೂರು ಸೇರಿದಂತೆ ದಕ್ಷಿಣ ಒಳಭಾಗ, ಕರಾವಳಿ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.
Advertisement
ಗಜ ಚಂಡಮಾರುತದ ಭೀಕರತೆಗೆ ತಮಿಳುನಾಡಿನಲ್ಲಿ ಇದುವರೆಗೂ 33 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಕಣ್ಮರೆಯಾಗಿದ್ದಾರೆ. ಸದ್ಯ ಬಿರುಗಾಳಿ ಮಳೆ ನಿಂತಿದ್ದು, ಎಲ್ಲಿ ನೋಡಿದರು ಹಾನಿಗೊಳಗಾದ ಮನೆಗಳು, ಮರಗಳು, ಕರೆಂಟ್ ಕಂಬಗಳೇ ಕಾಣಸಿಗುತ್ತಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews