ಬೆಂಗಳೂರು: ಗುರುವಾರದಿಂದ ಒಂದು ವಾರಗಳ ಕಾಲ ರಾಜ್ಯದಲ್ಲಿ ಗಾಳಿ ಸಹಿತ ಮಳೆಯಾಗುವ (Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.
ಬಂಗಾಳಕೊಲ್ಲಿಯಲ್ಲಿ (Bay Of Bengal) ಚಂಡಮಾರುತಗಳು (Cyclone) ಚುರುಕುಗೊಂಡ ಹಿನ್ನೆಲೆ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 03, 04 ಮತ್ತು 05ರಂದು ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ಕನ್ನಡ, ಕನ್ನಡಿಗರಿಗಾಗಿ 2 ಕೋಟಿ ಈಡುಗಾಯಿ ಹೊಡೆಯಿರಿ: ವಾಟಾಳ್ ನಾಗರಾಜ್ ಕರೆ
ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರಾವಾಡ, ಗದಗ, ಹಾವೇರಿ ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಇಂದು ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇದನ್ನೂ ಓದಿ: ಚೆಕ್‌ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಿರ್ಮಾಪಕ ಎಂ.ಎನ್ ಕುಮಾರ್ ಅರೆಸ್ಟ್