ಚೆನ್ನೈ: ಭಾರೀ ನಷ್ಟ ಉಂಟು ಮಾಡಿದ ತೀವ್ರ ಸ್ವರೂಪದ ಮಿಚಾಂಗ್ ಚಂಡಮಾರುತ (Cyclone Michaung) ಆಂಧ್ರದ ಬಾಪಟ್ಲಾ ಸಮೀಪ ತೀರವನ್ನು ತಾಕಿದೆ. ತೂಫಾನ್ ಪರಿಣಾಮ ಕೋಸ್ತಾ ಆಂಧ್ರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ರಸ್ತೆಗಳು ಮಾತ್ರವಲ್ಲದೇ ಕೆಲ ಊರುಗಳೂ ಜಲಾವೃತವಾಗಿವೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ತಿರುಮಲ ತಿರುಪತಿ (Tirumala Temple) ಜಲಮಯವಾಗಿದ್ದು, ಜಲಪಾತಗಳಿಗೆ ಜೀವಕಳೆ ಪಡೆದಿವೆ. ಕಾಳಹಸ್ತಿ ಜಲದಿಗ್ಬಂಧನದಲ್ಲಿದೆ. ಸಮುದ್ರದಲ್ಲಿ ಅಲೆಗಳಂತೂ ಎರಡು ಮೀಟರ್ ಎತ್ತರದವರೆಗೂ ಏಳುತ್ತಿದ್ದವು. ಮತ್ತೊಂದ್ಕಡೆ, ಚೆನ್ನೈ (Chennai Rain) ಮೇಲೆ ಮಿಚಾಂಗ್ ಪ್ರಭಾವ ಕಡಿಮೆ ಆಗಿದೆ. ಆದ್ರೆ ಕೆಲವು ಕಡೆ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಇದನ್ನೂ ಓದಿ: ಹಿಂದೂ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ – ಠಾಣೆ ಎದುರೇ ಹಾರ ಬದಲಿಸಿದ ಜೋಡಿ
Advertisement
Advertisement
ನಟ ವಿಶಾಲ್ (Actor Vishal) ನಿವಾಸ ಜಲಾವೃತವಾಗಿದೆ. ವಿಶಾಲ್ ಮನೆಯಲ್ಲಿದ್ದ ನಟ ಅಮೀರ್ ಖಾನ್‌ರನ್ನು ರಕ್ಷಣಾ ಪಡೆಗಳು ರಕ್ಷಿಸಿವೆ. ಇಂದು (ಡಿ.6) ಸಹ ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆ ಇದೆ. ಒಡಿಶಾ ಕೂಡ ಅಲರ್ಟ್ ಆಗಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದನ್ನೂ ಓದಿ: ಅರಬ್ಬಿ ಸಮುದ್ರದಲ್ಲಿ 26 ಜನ ಮೀನುಗಾರರ ರಕ್ಷಣೆ
Advertisement
ರಾಜ್ಯದಲ್ಲಿ 5 ದಿನ ಮಳೆ ಸಾಧ್ಯತೆ: ಕರ್ನಾಟಕದ ಹಲವು ಭಾಗದಲ್ಲಿ ಮೂರ್ನಾಲ್ಕು ದಿನದಿಂದ ಚಳಿಯ ವಾತಾವರಣವಿದೆ. ಮುಂದಿನ ಐದು ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ (Rain In Karnataka) ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೆರೆಯ ತಮಿಳುನಾಡು, ಆಂಧ್ರಪ್ರದೇಶ, ಪಾಂಡಿಚೇರಿ ರಾಜ್ಯಗಳಲ್ಲಿ ಆಗುತ್ತಿರುವ ಮಿಚಾಂಗ್ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಆಗುವ ಸಾಧ್ಯತೆಗಳಿಲ್ಲ.
Advertisement
ಆದಾಗ್ಯೂ ಕರ್ನಾಟಕದ ಕರಾವಳಿ ಜಿಲ್ಲೆಗಳೂ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್ 10ರವರಗೆ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್ 6ರ ಬುಧವಾರ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿಯಲ್ಲಿ ಮಾತ್ರ ಒಣ ಹವೆಯ ವಾತಾವರಣ ಕಂಡು ಬರಲಿದೆ. ಇದನ್ನೂ ಓದಿ: ವಿಭಜನೆಯ ಸಿದ್ಧಾಂತ 70 ವರ್ಷದಿಂದ ಬಂದ ಅಭ್ಯಾಸ, ಜನ ಈಗ ಎಚ್ಚೆತ್ತಿದ್ದಾರೆ: ಕಾಂಗ್ರೆಸ್ಸನ್ನು ಕುಟುಕಿದ ಮೋದಿ
ಡಿಸೆಂಬರ್ 7 ರ ಗುರುವಾರದಂದು ಉತ್ತರ ಒಳನಾಡಿನ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗಬಹುದು. ಅದೇ ರೀತಿ ಕರಾವಳಿ ಜಿಲ್ಲೆಯಲ್ಲಿ ಮಾತ್ರ ಮಳೆ ಸಾಧ್ಯತೆ ಕಡಿಮೆ. ಈ ಭಾಗದಲ್ಲಿ ಒಣ ಹವೆಯ ವಾತಾವರಣ ಇರುವ ಸಾಧ್ಯತೆಗಳು ಅಧಿಕವಾಗಿವೆ.
ಡಿಸೆಂಬರ್ 8ರ ಶುಕ್ರವಾರದಂದು ಕರ್ನಾಟಕ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳು, ಕರಾವಳಿಯ ಮೂರೂ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ. ಇದೆ. ಎಲ್ಲೆಡೆ ಒಣ ಹವೆಯ ವಾತಾವರಣ ಇರಲಿದೆ.
ಡಿಸೆಂಬರ್ 9ರ ಶನಿವಾರದಂದು ಕರಾವಳಿ ಭಾಗದ ಮೂರೂ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಗಳಿವೆ. ಅದೇ ರೀತಿ ಬೆಂಗಳೂರು, ಮೈಸೂರು,ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು. ಆದರೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರ ಒಣಹವೆಯ ವಾತಾವರಣ ಕಂಡು ಬರಲಿದೆ.
ಡಿಸೆಂಬರ್ 10ರ ಭಾನುವಾರದಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಆದರೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.