ತಿತ್ಲಿ ಚಂಡಮಾರುತಕ್ಕೆ ತತ್ತರಿಸಿ ಕೊಚ್ಚಿ ಹೋಯ್ತು ಸೇತುವೆ: ವಿಡಿಯೋ ನೋಡಿ

Public TV
1 Min Read
Cyclone Titli

ಭುವನೇಶ್ವರ: ತಿತ್ಲಿ ಚಂಡಮಾರುತದ ಅಬ್ಬರಕ್ಕೆ ಒಡಿಶಾದಲ್ಲಿ ಸೇತುವೆಯೊಂದು ಕೊಚ್ಚಿ ಹೋಗಿದೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಸೆರೆಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಗಂಜಮ್ ಜಿಲ್ಲೆಯ ಕಳಿಂಗದಳ ಪ್ರದೇಶದಲ್ಲಿ ಘಟನೆ ನಡೆದಿದ್ದು, ಬಹುದಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಪ್ರವಾಹಕ್ಕೆ ಕೊಚ್ಚಿ ಹೋಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಬಂಗಾಳಕೊಲ್ಲಿ ಕಾಣಿಸಿಕೊಂಡ ತಿತ್ಲಿ ಚಂಡಮಾರುತ ದೇಶದ ಕರಾವಳಿ ಭಾಗದಲ್ಲಿ ಭಾರೀ ಸದ್ದು ಮಾಡುತ್ತಿದೆ. ಆಂಧ್ರ ಪ್ರದೇಶ ಹಾಗೂ ಒಡಿಶಾ ರಾಜ್ಯಗಳೇ ಹೆಚ್ಚಿನ ಪರಿಣಾಮವನ್ನು ಎದುರಿಸಿತ್ತಿವೆ.

ಒರಿಶಾ ಕರಾವಳಿಗೆ ತಿತ್ಲಿ ಚಂಡಮಾರುತ ಅಪ್ಪಳಿಸಿದ್ದು, ಗಂಜಮ್, ಗಜಪತಿ ಹಾಗೂ ರಾಯಗಡ ಭಾಗದಲ್ಲಿ ವರುಣನ ಆರ್ಭಟ ಹೆಚ್ಚಾಗುತ್ತಿದೆ. ಇದರಿಂದಾಗಿ ಪ್ರವಾಹ ಉಂಟಾಗಿದ್ದು, ಬಹುದಾ, ಋಷಿಕುಲ್ಯ ಹಾಗೂ ವಂಶಧಾರ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಗಂಜಮ್ ಜಿಲ್ಲೆಯ 22 ಬ್ಲಾಕ್‍ನ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಸಾವಿರಾರು ಜನರನ್ನು ಸ್ಥಳಾಂತರಿಸಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *