ಮಂಗಳೂರು: ಅರಬ್ಬಿ ಸಮುದ್ರದಲ್ಲಿ ತಿತ್ಲಿ ಚಂಡಮಾರುತದ ಪರಿಣಾಮ ಮಂಗಳೂರಿನ ಉಳ್ಳಾಲ, ಸೋಮೇಶ್ವರದಲ್ಲಿ ಕಡಲು ಉಕ್ಕೇರುತ್ತಿದೆ.
ಕಳೆದ ಎರಡು ದಿನಗಳಿಂದ ಕಡಲು ಉಕ್ಕೇರುತ್ತಿದ್ದು, ಸಮುದ್ರದ ಸಮೀಪದ ಮನೆಗಳಿಗೆ ನೀರು ನುಗ್ಗುತ್ತಿದೆ. ಉಳ್ಳಾಲ ಸಮೀಪದ ಸೋಮೇಶ್ವರ, ಪೆರಿಬೈಲ್‍ನಲ್ಲಿ ಹತ್ತಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿವೆ. ಇಷ್ಟೇಲ್ಲ ಅನಾಹುತವಾದರೂ ಜಿಲ್ಲಾಡಳಿತ ಸ್ಥಳಕ್ಕೆ ಭೇಟಿ ನೀಡದೆ ಬೇಜವಾಬ್ದಾರಿ ಮೆರದಿದೆ ಎಂದು ಸ್ಥಳೀಯರು ದೂರಿದ್ದಾರೆ. ಇದನ್ನು ಓದಿ: ಒಡಿಶಾ, ಆಂಧ್ರ ಕರಾವಳಿಯಲ್ಲಿ ತಿತ್ಲಿ ಅಬ್ಬರ – ಗಂಟೆಗೆ 145 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ!
Advertisement
ಸಾಮಾನ್ಯವಾಗಿ ಮಧ್ಯಾಹ್ನ 11 ಗಂಟೆಯಿಂದ ಸಂಜೆ 5ವರೆಗೆ, ಮತ್ತೆ ರಾತ್ರಿ 12ರ ನಂತರ ಕಡಲು ಉಕ್ಕೇರುತ್ತದೆ. ಹೀಗಾಗಿ ಸಮುದ್ರದ ಸಮೀಪದಲ್ಲಿ ಮನೆಯಿರುವ ಜನರು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಇದಕ್ಕೆ ಯಾವುದೇ ಪರ್ಯಾಯ ವ್ಯವಸ್ಥೆಗೆ ಜಿಲ್ಲಾಡಳಿತ ಮುಂದಾಗದೇ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
Advertisement
#WATCH: Early morning visuals of #TitliCyclone making landfall in Srikakulam's Vajrapu Kotturu. #AndhraPradesh pic.twitter.com/x7H4yoF7ez
— ANI (@ANI) October 11, 2018