ಬೆಂಗಳೂರು: ಭಾರೀ ಮಳೆಯಿಂದ ಈಗಾಗಲೇ ಕಂಗೆಟ್ಟಿರುವ ರಾಜ್ಯಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ನವೆಂಬರ್ 26ರಿಂದ ಮೂರು ದಿನ ಬೆಂಗಳೂರು ಸೇರಿ ಹಲವೆಡೆ ಮತ್ತೆ ವರುಣಾರ್ಭಟದ ಮುನ್ಸೂಚನೆ ಸಿಕ್ಕಿದೆ.
Advertisement
ಬಂಗಾಳಕೊಲ್ಲಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತ, ಚಂಡಮಾರುತವಾಗಿ ರೂಪುಗೊಳ್ಳುವ ಸಂಭವ ಇದೆ. ಇದರ ಪರಿಣಾಮ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಆರಗ ಜ್ಞಾನೇಂದ್ರ ಇಡೀ ರಾಜ್ಯಕ್ಕೆ ಅಲ್ಲ, ಕೇವಲ ತೀರ್ಥಹಳ್ಳಿಗೆ ಮಾತ್ರ ಗೃಹ ಸಚಿವ: ಕಿಮ್ಮನೆ ರತ್ನಾಕರ್
Advertisement
Advertisement
ಸಮಾಧಾನದ ವಿಚಾರ ಅಂದ್ರೆ ನಾಳೆಯಿಂದ ಮೂರು ದಿನ ವರುಣದೇವ ರಾಜ್ಯದ ಜನತೆಗೆ ಒಂದಿಷ್ಟು ಬಿಡುವು ಕೊಡಲಿದ್ದಾನೆ. ಆದರೆ ಬೆಂಗಳೂರಲ್ಲಿ ಮಾತ್ರ ತುಂತುರು ಮಳೆ ಮುಂದುವರಿಯುವ ಸಾಧ್ಯತೆ ಇದೆ. ಪ್ರಸಕ್ತ ತಿಂಗಳಲ್ಲಿ ಈವರೆಗೂ ಬೆಂಗಳೂರಿನಲ್ಲಿ ವಾಡಿಕೆಗಿಂತ 4 ಪಟ್ಟು ಹೆಚ್ಚು ಮಳೆಯಾಗಿದೆ. ನವೆಂಬರ್ ತಿಂಗಳಲ್ಲಿ 57 ಮಿ.ಮೀ ಮಳೆಯಾಗಬೇಕಿತ್ತು. ಆದರೆ ಬರೋಬ್ಬರಿ 267 ಮಿ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಪರಿಷತ್ ಚುನಾವಣೆ- ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ