ಬೆಂಗಳೂರಿನ ಕಮ್ಮಗೊಂಡನಹಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ – ತಪ್ಪಿದ ಭಾರೀ ಅನಾಹುತ

0 Min Read

ಬೆಂಗಳೂರು: ನಗರದ ಅಬ್ಬಿಗೆರೆ ಮುಖ್ಯ ರಸ್ತೆಯ ಕಮ್ಮಗೊಂಡನಹಳ್ಳಿಯಲ್ಲಿರುವ ಆಯಿಲ್ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡ (Cylinder Blast) ಘಟನೆ ನಡೆದಿದೆ.

ಅಂಗಡಿಯ ಕೊಠಡಿಯೊಂದರಲ್ಲಿ ಇಟ್ಟಿದ್ದ ಮೂರು ಸಿಲಿಂಡರ್‌ನಲ್ಲಿ ಸ್ಫೋಟ ಸಂಭವಿಸಿದೆ. ಘಟನೆ ನಡೆದ ಸಂದರ್ಭದಲ್ಲಿ ಅಂಗಡಿಯಲ್ಲಿ ಯಾರೂ ಇರಲಿಲ್ಲ.

ಇದರಿಂದ ಅದೃಷ್ಟವಶಾತ್, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಅವಘಡ ಸಂಭವಿಸಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಗಂಗಮ್ಮನಗುಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Exit mobile version