ಆನೇಕಲ್: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು (Cylinder Blast) ಓರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನೆರಳೂರು ಬಳಿ ನಡೆದಿದೆ.
ನೆರಳೂರು ರಾಘವ ನಗರದ ಮುನಿರಾಜು ಬಡಾವಣೆಯ ದಿನೇಶ್ ದಾಸ್‌ಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ಆನಂದ್ ಸಿಂಗ್ ವಿರುದ್ಧ ಅಕ್ರಮ ಗಣಿಗಾರಿಕೆ ಕೇಸ್ – ಫೆ.24ಕ್ಕೆ ಅಂತಿಮ ತೀರ್ಪು ಪ್ರಕಟ
Advertisement
Advertisement
ಮನೆಯಲ್ಲಿ ಗ್ಯಾಸ್ ಸೋರಿಕೆಯಿಂದ ಬೆಳಗ್ಗೆ 7 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆ ಛಾವಣಿಯೇ ಚಿಂದಿ ಚಿಂದಿಯಾಗಿದೆ. ಈ ವೇಳೆ ಮನೆಯಲ್ಲಿದ್ದ ದಿನೇಶ್ ದಾಸ್‌ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ದುನಿಯಾ ವಿಜಯ್ ನಿರ್ದೇಶನದ ‘ಸಿಟಿ ಲೈಟ್ಸ್’ ಚಿತ್ರದ ಪೋಸ್ಟರ್ ಔಟ್
Advertisement
Advertisement
ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಯಿತು. ಅತ್ತಿಬೆಲೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇದನ್ನೂ ಓದಿ: ರಾಜ್ಯಗಳು ಹೆಚ್ಚಿನ ತೆರಿಗೆ ಪಾಲು ಕೇಳೋದು ಸಣ್ಣತನ: ಪಿಯೂಷ್ ಗೋಯಲ್