ಬಳ್ಳಾರಿ: ಅಡುಗೆ ಸಿಲಿಂಡರ್ ಸ್ಫೋಟಗೊಂಡ (Cylinder Blast) ಪರಿಣಾಮ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೋಸಪೇಟೆ (Hospete) ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ.
ಮನೆಯಲ್ಲಿ ಎಲ್ಲರೂ ಮಲಗಿರುವಾಗ ಬೆಳಗ್ಗಿನ ಜಾವ ಘಟನೆ ನಡೆದಿದ್ದು, ಸಿಲಿಂಡರ್ ಸ್ಫೋಟದಲ್ಲಿ ಹಾಲಪ್ಪ (42), ಕವಿತಾ (32), ಗಂಗಮ್ಮ (63), ಮೈಲಾರಪ್ಪ (48), ಹಾಗೂ ಮಲ್ಲಮ್ಮ ಸೇರಿ 8 ಜನ ಗಾಯಗೊಂಡಿದ್ದಾರೆ. ಇದನ್ನೂ ಓದಿ: ತನ್ನ ಸ್ವಾರ್ಥಕ್ಕಾಗಿ ನಮ್ಮನ್ನಿಲ್ಲಿ ಕೊಳೆಯುವಂತೆ ಮಾಡಿದ್ದಾನೆ – ದರ್ಶನ್ ವಿರುದ್ಧವೇ ಗ್ಯಾಂಗ್ ಸದಸ್ಯರ ಅಸಮಾಧಾನ?
ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಬಳ್ಳಾರಿ (Ballari) ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಬಾಲಕಿಯ ರೇಪ್ ಮಾಡಿ ಕೊಲೆ – ಕಾಮುಕನಿಗೆ ಗಲ್ಲು ಶಿಕ್ಷೆ
ಸಿಲಿಂಡರ್ ಸ್ಪೋಟದ ತೀವ್ರತೆಗೆ ಮನೆ ಸಂಪೂರ್ಣ ಕುಸಿದು ಬಿದ್ದಿದೆ. ಘಟನಾ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕದಳದ ಸಿಬ್ಬಂದಿ, ಹೊಸಪೇಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ಘಟನಾ ಸ್ಥಳ ಪರಿಶೀಲಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ದಾವಣಗೆರೆ | `ಐ ಲವ್ ಮಹಮ್ಮದ್’ ಬ್ಯಾನರ್ ಗಲಾಟೆ – 8 ಮಂದಿ ಅರೆಸ್ಟ್