ಉಡುಪಿ: ಜಿಲ್ಲೆಯ ಕಾಪು ತಾಲೂಕು ಮಲ್ಲಾರು ಸಲಫಿ ಮಸೀದಿ ಸಮೀಪದಲ್ಲಿರುವ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡ ಘಟನೆ ನಡೆದಿದೆ.
ಮೃತರು ಅಂಗಡಿಯ ಮಾಲಕ ಚಂದ್ರನಗರದ ರಜಬ್ ಹಾಗೂ ರಜಾಕ್ ಮಲ್ಲಾರ್. ಇನ್ನೋರ್ವ ಪಾಲುದಾರ ಹಸನಬ್ಬ ಸೇರಿದಂತೆ ಮೂವರು ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಯೋಗಿ ಪ್ರಮಾಣವಚನಕ್ಕೂ ಮುನ್ನವೇ ಹೊರಬಿತ್ತು ಸಚಿವ ಆಕಾಂಕ್ಷಿಗಳ ಪಟ್ಟಿ- ರೇಸ್‍ನಲ್ಲಿ ಯಾರಿದ್ದಾರೆ ನೋಡಿ
ಅಂಗಡಿಯಲ್ಲಿ ಗುಜರಿ ಕಟ್ಟಿಂಗ್ ಗೆ ಬಳಸಲಾಗುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
ಗುಜರಿ ಅಂಗಡಿಯಲ್ಲಿ ಇರಿಸಲಾದ ಹಳೆಯ ಪ್ರಿಜ್ ಸೇರಿದಂತೆ ಗುಜರಿ ಸಾಮಗ್ರಿಗಳು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ತಂಡ ಎರಡು ವಾಹನಗಳಲ್ಲಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಇದನ್ನೂ ಓದಿ: 13 ಗಂಟೆಯಲ್ಲಿ ಶ್ರೀಲಂಕಾದಿಂದ ತಮಿಳುನಾಡಿಗೆ ಸ್ವಿಮ್ಮಿಂಗ್ ಮಾಡಿದ 13ರ ಬಾಲಕಿ