ಹುಬ್ಬಳ್ಳಿ: ಜಿಲ್ಲೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು (Cylinder Leakage) ಗಾಯಗೊಂಡಿದ್ದ ಅಯ್ಯಪ್ಪ ಮಾಲಾಧಾರಿಗಳ ಸಾವಿನ ಸಂಖ್ಯೆ ಇದೀಗ 4ಕ್ಕೆ ಏರಿಕೆಯಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೇ ಮತ್ತೋರ್ವ ಸಾವನ್ನಪ್ಪಿದ್ದಾನೆ.
ಮೃತ ಯುವಕನನ್ನು 19 ವರ್ಷದ ಲಿಂಗರಾಜ ಬೀರನೂರ ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಯ (Hubballi) ಉಣಕಲ್‌ನ ಅಚ್ಚವ್ವ ಕಾಲೊನಿಯಲ್ಲಿ ಸಿಲಿಂಡರ್ ಸೋರಿಕೆಯಿಂದಾಗಿ ಒಂಬತ್ತು ಜನ ಅಯ್ಯಪ್ಪ ಮಾಲಾಧಾರಿಗಳು ಗಂಭೀರಗೊಂಡಿದ್ದರು. ಇವರ ಪೈಕಿ ಈಗಾಗಲೇ ಮೂವರು ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದ ಯುವಕ ಬಾವಿಗೆ ಬಿದ್ದು ಸಾವು!
ಸಾವಿನ ಸಂಖ್ಯೆ ಏರಿಕೆಯಾಗುತ್ತಿದ್ದಂತೆ ಸಚಿವ ಸಂತೋಷ್ ಲಾಡ್ (Santosh Lad) ಹಾಗೂ ಮಹೇಶ್ ಟೆಂಗಿನಕಾಯಿ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಜೊತೆಗೆ ಸರ್ಕಾರ ಹೆಚ್ಚಿನ ಆರ್ಥಿಕ ಸಹಾಯ ಮಾಡಬೇಕು ಎಂದು ಆಗ್ರಹಿಸಿದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ (Sharana Prakash Patil) ಕೂಡ ಕಿಮ್ಸ್ ನಿರ್ದೇಶಕರಿಂದ ಮಾಲಾಧಾರಿಗಳ ಬಗ್ಗೆ ಮಾಹಿತಿ ಪಡೆದರು. ಈ ಮಧ್ಯೆ, ಕಿಮ್ಸ್ ನಿರ್ದೇಶಕ ಡಾ.ಎಸ್ ಎಫ್ ಕಮ್ಮಾರ್ ಪ್ರತಿಕ್ರಿಯಿಸಿ, ಬದುಕಿಸಲು ಎಷ್ಟೇ ಪ್ರಯತ್ನಿಸಿದರೂ ಆಗಲಿಲ್ಲ. ಐವರ ಸ್ಥಿತಿ ಚಿಂತಾಜನಕವಾಗಿದ್ದು, ದೇವರೇ ಕಾಪಾಡಬೇಕು ಎಂದು ಅಸಹಾಯಕತೆಯನ್ನು ವ್ಯಕ್ತಪಡಿಸಿದರು.ಇದನ್ನೂ ಓದಿ: ಅಂತ್ಯಕ್ರಿಯೆ ಸ್ಥಳದಲ್ಲೇ ತಲೆಯೆತ್ತಲಿದೆಯೇ ಸಿಂಗ್ ಸ್ಮಾರಕ? – ಪ್ರಧಾನಿ ಮೋದಿಗೆ ಕಾಂಗ್ರೆಸ್ ಪತ್ರ!