ಹುಬ್ಬಳ್ಳಿ: ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ರಾಜಸ್ಥಾನ (Rajasthan) ಜೋಧ್‌ಪುರದ (Jodhpur) ಸುಭಾಶ್ ಮೋಹನರಾಮ್ (26) ಮೃತ ದುರ್ದೈವಿ. ಹುಬ್ಬಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶದ ಫಾರ್ಮ್‌ಹೌಸ್‌ನಲ್ಲಿ ಅಡುಗೆ ಅನಿಲ ಸೋರಿಕೆಯಿಂದಾದ ಸ್ಫೋಟದಲ್ಲಿ ಸುಭಾಶ್ ಗಂಭೀರ ಗಾಯಗೊಂಡಿದ್ದರು. ಇದನ್ನೂ ಓದಿ: ತುಮಕೂರು | ಮನೆ ಮುಂದಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ – ಭಯಭೀತರಾದ ಗ್ರಾಮಸ್ಥರು
ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಭಾಶ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿದ್ದ ಇನ್ನಿಬ್ಬರನ್ನು ಸುಭಾಶ್ ಕಡೆಯವರು ರಾಜಸ್ಥಾನದ ತಮ್ಮ ಊರಿಗೆ ಕರೆದೊಯ್ದಿದ್ದಾರೆ. ಇದನ್ನೂ ಓದಿ: ಜನ ಸಾಮಾನ್ಯರ ಬಳಿ ಫಟಾಫಟ್ ವಸೂಲಿ – ಸರ್ಕಾರಿ ಇಲಾಖೆಗಳಿಂದಲೇ 8,000 ಕೋಟಿ ವಿದ್ಯುತ್ ಬಿಲ್ ಬಾಕಿ!