ವಿಜಯಪುರ: ಮನೆಯಲ್ಲಿ ಯಾರು ಇಲ್ಲದ ವೇಳೆ ಸಿಲಿಂಡರ್ ಸ್ಫೋಟಗೊಂಡು 7 ವರ್ಷದ ಹಿಂದೆ ನಿರ್ಮಿಸಿದ್ದ ಮನೆಯ ಗೋಡೆ ಕುಸಿದಿರುವ ಘಟನೆ ವಿಜಯಪುರ (Vijayapura) ಜಿಲ್ಲೆಯ ತಾಳಿಕೋಟೆಯಲ್ಲಿ (Talikote) ನಡೆದಿದೆ.
ರವಿ ಕೋಳುರ್ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದ್ದು, ತೀವ್ರತೆಗೆ ಮನೆ ಸಂಪೂರ್ಣ ಜಖಂ ಆಗಿದೆ. 7 ವರ್ಷದ ಹಿಂದೆ ನಿರ್ಮಿಸಿದ್ದ ಮನೆಯಲ್ಲಿ ಅಡುಗೆ ಸಿಲಿಂಡರ್ ಗ್ಯಾಸ್ ಲೀಕ್ ಆಗಿ, ದೇವರ ಮುಂದೆ ಇಟ್ಟಿದ್ದ ದೀಪಕ್ಕೆ ತಗುಲಿ ಸ್ಫೋಟಗೊಂಡಿದೆ. ಪರಿಣಾಮ ಮನೆಯ ಗೋಡೆ ಕುಸಿದಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.ಇದನ್ನೂ ಓದಿ: ಒಕ್ಕಲಿಗ ನಾಯಕರಾಗಿ ಬೇಡ, ಡಿಕೆಶಿ ಅವಶ್ಯಕತೆ ಪಕ್ಷಕ್ಕಿದ್ರೇ ಸಿಎಂ ಪಟ್ಟ ಕೊಡಬೇಕು – ಕೆಂಚಪ್ಪ ಗೌಡ
ಸ್ಫೋಟದ ತೀವ್ರತೆಗೆ ಮನೆಯ ಕಿಟಕಿ ಗಾಜು, ಬಾಗಿಲು ಒಡೆದು ಚೂರು ಚೂರಾಗಿವೆ. ಮನೆಯಲ್ಲಿದ್ದ ಪೀಠೋಪಕರಣ, ಬಟ್ಟೆ, ಮಹತ್ವದ ದಾಖಲೆಗಳು ಸುಟ್ಟು ಭಸ್ಮವಾಗಿವೆ.
ಸದ್ಯ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: ಡಿಕೆಶಿಗೆ ಸಿಎಂ ಪಟ್ಟ ಕೊಡದಿದ್ದರೆ ರಾಜ್ಯದಲ್ಲಿರುವ ಸರ್ಕಾರ ಪತನ: ವೀರೇಶ್ವರ ಸ್ವಾಮೀಜಿ

