ಕೋಲಾರ: ಗ್ಯಾಸ್ ಸೋರಿಕೆಯಾಗಿ (Gas Leak) ಸಿಲಿಂಡರ್ ಸಿಡಿದು (Cylinder Blast) ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ (Couple) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಕೋಲಾರ ತಾಲೂಕಿನ ಮಣಿಘಟ್ಟ ರಸ್ತೆಯಲ್ಲಿರುವ ಮಧುಸೂಧನ್ ತೋಟದ ಮನೆಯಲ್ಲಿ ಸೆಪ್ಟೆಂಬರ್ 16ರಂದು ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ದಂಪತಿ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಕುಪ್ಪಡಹಳ್ಳಿ ಗ್ರಾಮದ ದಂಪತಿ ಕೋಲಾರ ತಾಲೂಕಿನ ಮಣಿಘಟ್ಟ ರಸ್ತೆಯಲ್ಲಿರುವ ಮಧುಸೂಧನ್ ತೋಟದ ಮನೆಯಲ್ಲಿ ವಾಸವಿದ್ದರು. ಇದನ್ನೂ ಓದಿ: ಪೊಲೀಸ್ ಕಸ್ಟಡಿಯಿಂದ ಎಸ್ಕೇಪ್‌ಗೆ ಯತ್ನ – 2ನೇ ಮಹಡಿಯಿಂದ ಜಿಗಿದು ಕೈಕಾಲು ಮುರಿದುಕೊಂಡ ಬಿಜೆಪಿ ಕಾರ್ಯಕರ್ತ
ಕಾಫಿ ಮಾಡುವ ವೇಳೆ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯ ಪರಿಣಾಮ ತೀವ್ರ ಗಾಯಗೊಂಡ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತ ದಂಪತಿಯನ್ನು ಗಿರೀಶ್ ಹಾಗೂ ನಂದಿನಿ ಎಂದು ಗುರುತಿಸಲಾಗಿದೆ. ಸಿಲಿಂಡರ್ ಬ್ಲಾಸ್ಟ್‌ನಿಂದ ದಂಪತಿಗೆ ಗಂಭೀರ ಗಾಯಗಳಾಗಿದ್ದು, ಬೆಂಗಳೂರಿನ (Bengaluru) ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾರ್ಟ್‍ಮೆಂಟ್‍ನಿಂದ ಜಿಗಿದು ಸಾವು
Web Stories