ಬೆಂಗಳೂರು: ನಗರದಲ್ಲಿ ಸರಣಿ ಸ್ಫೋಟಗೊಂಡು ಮೂವರು ಸಾವನ್ನಪ್ಪಿದ್ದು ನಾಲ್ವರು ಗಾಯಗೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ ನಡೆದಿದೆ. ಇದನ್ನೂ ಓದಿ: ಸೊಸೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಲವಂತವಾಗಿ ಕೋಳಿ ರಕ್ತ ಕುಡಿಸಿದ ಮಾವ!
Advertisement
ಪಟಾಕಿ ಅಂಗಡಿ, ಶ್ರೀ ಪತ್ರ ಕಾಳಿ ಅಮ್ಮನ್ ಲಾರಿ ಸರ್ವೀಸ್ ಗೋದಾಮಿಯಲ್ಲಿ ಪಟಾಕಿ ಸ್ಫೋಟ ಹಾಗೂ ಪಂಕ್ಚರ್ ಅಂಗಡಿಯಲ್ಲಿ ಹೈಡ್ರೋಲಿಕ್ ಸಿಲಿಂಡರ್ ಸ್ಫೋಟ ಸಂಭವಿಸಿದೆ. ನಗರ್ತರಪೇಟೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದರೆ, ಶ್ರೀ ಪತ್ರಕಾಳಿ ಅಮ್ಮನ್ ಲಾರಿ ಸರ್ವೀಸಸ್ ಗೋಡೌನ್‍ನಲ್ಲಿ ಪಟಾಕಿ ಸ್ಫೋಟಗೊಂಡು ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನೂ ಪಟಾಕಿ ಸ್ಫೋಟದಿಂದ ಮೃತರ ದೇಹ ಛಿದ್ರ ಛಿದ್ರಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಇದೀಗ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.
Advertisement
Advertisement
ಮೃತರನ್ನು ಅಸ್ಲಾಂ, ಫಯಾಜ್, ಮನೋಹರ್ ಎಂದು ಗುರುತಿಸಲಾಗಿದೆ. ಸ್ಫೋಟದ ವೇಳೆ ಪಂಕ್ಚರ್ ಅಂಗಡಿ ಮುಂದೆ ನಿಂತಿದ್ದ 10ಕ್ಕೂ ಹೆಚ್ಚು ವಾಹನಗಳು ಜಖಂ ಆಗಿದ್ದು, ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಇದೀಗ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಘಟನಾ ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: 17 ವರ್ಷದ ದಾಂಪತ್ಯ ಅಂತ್ಯಗೊಳಿಸಿ ಡೈವೋರ್ಸ್ ಪಾರ್ಟಿ ಮಾಡಿದ ಮಹಿಳೆ
Advertisement
ಈ ಸಂಬಂಧ ಡಿಸಿಪಿ ಮಾತನಾಡಿ, ಬ್ಲಾಸ್ಟ್ ಆಗಿರೋದು ಸಿಲಿಂಡರ್, ಶಾರ್ಟ್ ಸರ್ಕ್ಯೂಟ್ ಅಲ್ಲ. ಎಫ್ ಎಸ್ ಎಲ್ ಅಧಿಕಾರಿಗಳು ಬರುತ್ತಾರೆ ಎಂದು ತಿಳಿಸಿದ್ದಾರೆ.