ಬೆಂಗಳೂರಲ್ಲಿ ಸಿಲಿಂಡರ್‌ ಸ್ಫೋಟ – ಮೂವರಿಗೆ ಗಂಭೀರ ಗಾಯ

1 Min Read

ಬೆಂಗಳೂರು: ಆರ್‌.ಆರ್‌ ನಗರದ (R.R Nagar) ಮನೆಯೊಂದರಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು (Cylinder Explosion) ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಬ್ಲು, ಲಕ್ಷ್ಮಮ್ಮ ಮತ್ತು ಮತ್ತೋರ್ವ 9 ವರ್ಷದ ಬಾಲಕ ಗಾಯಗೊಂಡ ದುರ್ದೈವಿಗಳು. ಸಿಲಿಂಡರ್‌ ಸ್ಫೋಟದ ತೀವ್ರತೆಗೆ ಮನೆಯ ಛಾವಣಿಗೆ ಹಾಕಿದ್ದ ಸಿಮೆಂಟಿನ ಶೀಟ್‌ಗಳು ಛಿದ್ರ ಛಿದ್ರವಾಗಿವೆ. ಪೊಲೀಸರು ಗಾಯಾಳುಗಳನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಭೀಕರ ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಆರ್.ಆರ್.ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಅಕ್ರಮವಾಗಿ ಸಂಗ್ರಹಿಸಿದ್ದ ಗ್ಯಾಸ್ ಸಿಲಿಂಡರ್‌ಗಳ ಗೋದಾಮಿನಲ್ಲಿ ಸ್ಫೋಟ – ಮಾಲೀಕನಿಗೆ ಗಂಭೀರ ಗಾಯ

Share This Article
Exit mobile version