ಬೆಂಗಳೂರು: ಪಿಜಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು (Cylinder Explosion) ಓರ್ವ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಕುಂದಲಹಳ್ಳಿಯಲ್ಲಿ ನಡೆದಿದೆ.
ಸೆವೆನ್ ಹಿಲ್ಸ್ ಕೋಲಿವಿಂಗ್ ಪಿಜಿಯಲ್ಲಿ (Boys PG) ಘಟನೆ ನಡೆದಿದ್ದು, ಬಳ್ಳಾರಿ ಮೂಲದ ಅರವಿಂದ್ ಎಂಬುವವರು ಸಾವನ್ನಪ್ಪಿದ್ದಾರೆ. ವೆಂಕಟೇಶ್ (28), ವಿಶಾಲ್ (23), ಗೋಯಲ್ (25), ಎಂಬುವವರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಬೈಯ್ಯಪ್ಪನಹಳ್ಳಿಯಲ್ಲಿ ಪುನರ್ವಸತಿ: ಸಿಎಂ ಸಿದ್ದರಾಮಯ್ಯ ಘೋಷಣೆ – ಕರ್ನಾಟಕದಲ್ಲಿ ಕೇರಳ ರೂಲ್ ಎಂದು ಬಿಜೆಪಿ ಆಕ್ರೋಶ
ಘಟನಾ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರು ದೌಡಾಯಿಸಿದ್ದಾರೆ. ಇದನ್ನೂ ಓದಿ: ಸಂತ್ರಸ್ತರ ಅಹವಾಲು ಆಲಿಸಿದ ಡಿಕೆಶಿ – ಹೈಕಮಾಂಡ್ ಒತ್ತಡಕ್ಕೆ ಮಣೀತಾ ʻಕೈʼ ಸರ್ಕಾರ?
ಪ್ರಾಥಮಿಕ ಮೂಲಗಳ ಪ್ರಕಾರ, ಪಿಜಿಯ ಕೆಳಮಹಡಿಯಲ್ಲಿದ್ದ ಅಡುಗೆ ಕೋಣೆಯಲ್ಲಿ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ. ಸದ್ಯ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: Kogilu layout Demolition | ಅರ್ಹರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸರ್ಕಾರ ತೀರ್ಮಾನ: ಸಿದ್ದರಾಮಯ್ಯ
ಘಟನಾ ಸ್ಥಳ ಪರಿಶೀಲಿಸಿರುವ ಪೊಲೀಸರು ಮೃತದೇಹ ಅರವಿಂದ್ ಶವವನ್ನ ಬೌರಿಂಗ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಬಳಿಕ ಪಿಜಿಯಲ್ಲಿದ್ದ ಇತರರನ್ನ ಬೇರೆ ಬೇರೆ ಪಿಜಿಗಳಿಗೆ ಶಿಫ್ಟ್ ಮಾಡಿಸಿದ್ದಾರೆ. ಈ ಬೆನ್ನಲ್ಲೇ ಘಟನಾ ಸ್ಥಳಕ್ಕೆ ಜಿಬಿಎ ಅಧಿಕಾರಿಗಳು ಹಾಗೂ ಪೋರ್ವ ನಗರಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.


