ಹುಬ್ಬಳ್ಳಿ: ಧಾರವಾಡ (ಜಿಲ್ಲೆಯ ಹುಬ್ಬಳ್ಳಿ (Hubballi) ತಾಲೂಕಿನಲ್ಲಿ 2 ಪ್ರತ್ಯೇಕ ಪ್ರಕರಣದಲ್ಲಿ ಸಿಲಿಂಡರ್ ಸ್ಫೋಟಗೊಂಡ (Cylinder blast) ಪರಿಣಾಮ ಹಲವು ಮನೆಗಳು ಸುಟ್ಟು ಕರಕಲಾಗಿ ಲಕ್ಷಾಂತರ ಮೌಲ್ಯದ ಆಸ್ತಿ ಪಾಸ್ತಿ ನಷ್ಟವಾಗಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಪ್ರಮಾಣ ಹೆಚ್ಚಾಗಿ ಸಿಲಿಂಡರ್‌ಗೆ ತಗುಲಿದ ಹಿನ್ನೆಲೆ ಸ್ಫೋಟ ಸಂಭವಿಸಿದೆ. ಇದರಿಂದ 5 ಮನೆಗಳು ಅಗ್ನಿಗೆ ಆಹುತಿಯಾದ ಘಟನೆ ಹುಬ್ಬಳ್ಳಿ ತಾಲೂಕಿನ ಮಂಟೂರ ಗ್ರಾಮದಲ್ಲಿ ನಡೆದಿದೆ.
Advertisement
Advertisement
ಮಲ್ಲೇಶಪ್ಪ, ಖಾಸಿಂ ಸಾಬ್, ದವಲ್ ಸಾಬ್, ಅಶೋಕಪ್ಪ ಹಾಗೂ ರಮೇಶಪ್ಪ ಅವರಿಗೆ ಸೇರಿದ ಮನೆಗಳಿಗೆ ಬೆಂಕಿ ತಗುಲಿದ್ದು, ಇದರಲ್ಲಿ ಖಾಸಿಮ್ ಸಾಬ್ ಮತ್ತು ದವಲ್ ಸಾಬ್ ಅವರ ಮನೆಗಳು ಸಂಪೂರ್ಣ ಬೆಂಕಿಗಾಹುತಿಯಾಗಿ ಮನೆಯಲ್ಲಿದ್ದ ಲಕ್ಷಾಂತರ ರೂ. ಹಣ ಅಗ್ನಿಗಾಹುತಿಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಶವ ಅಂತ ಹೇಳ್ಬೇಡಿ ಚಂದ್ರು ಅಂತ ಕರೆಯಿರಿ- ಗೋಳಾಡಿದ ರೇಣುಕಾಚಾರ್ಯ
Advertisement
Advertisement
ಇನ್ನೊಂದೆಡೆ ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ಮಾಬೂಸಾಬ್ ಅಲ್ಲಿ ಸಾಬ ಸಂಶಿ ಅವರ ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ, ಮನೆಗೆ ಬೆಂಕಿ ಹತ್ತಿಕೊಂಡಿದೆ. ಮನೆಯಲ್ಲಿದ್ದ ದಿನಬಳಕೆ ವಸ್ತುಗಳು ಬೆಂಕಿಗಾಹುತಿಯಾಗಿವೆ. ಸಿಲಿಂಡರ್ ಸ್ಫೋಟಗೊಳ್ಳುತ್ತಲೇ ಮನೆಯವರು ಹೊರಗೆ ಬಂದು ಜೀವ ಉಳಿಸಿಕೊಂಡಿದ್ದಾರೆ. ಈ ಎರಡೂ ಪ್ರಕರಣದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದನ್ನೂ ಓದಿ: 5 ದಿನಗಳ ಬಳಿಕ ರೇಣುಕಾಚಾರ್ಯ ಸಹೋದರನ ಪುತ್ರನ ಶವ ಭದ್ರಾ ಮೇಲ್ದಂಡೆ ಕಾಲುವೆಯಲ್ಲಿ ಪತ್ತೆ