ಮಡಿಕೇರಿ: ನಿರ್ಗತಿಕರಿಗೆ ಆಸರೆಯಾಗಿದ್ದ ಸಮಾಜ ಸೇವಕ, ಪಬ್ಲಿಕ್ ಟಿವಿಯ ಬೆಳಕು ಕಾರ್ಯಕ್ರಮದಿಂದ ಚಿರಪರಿಚಿತರಾಗಿದ ರಮೇಶ್ (Ramesh) ಮನೆಯಲ್ಲಿ ಸಿಲಿಂಡರ್ ಸ್ಫೋಟದಿಂದ (Cylinder Blast) ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ರಮೇಶ್ ತೀವ್ರವಾಗಿ ಗಾಯಗೊಂಡಿದ್ದರು. ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ನಸುಕಿನ ಜಾವ 3:30ರ ವೇಳೆಗೆ ರಮೇಶ್ ನಿಧನರಾಗಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಮಂದಿರಕ್ಕೆ ಇಂದು ಕೊನೆಯ ದಿನ – ಬನ್ನಿ ಪಾಲ್ಗೊಳ್ಳಿ
Advertisement
Advertisement
ರಮೇಶ್ ಕೊಡಗು (Kodagu) ಜಿಲ್ಲೆಯಲ್ಲಿ ವಿಕಾಸ್ ಜನಸೇವಾ ಟ್ರಸ್ಟ್‌ನ ಆಶ್ರಮ ಸ್ಥಾಪಿಸಿದ್ದರು. ಕಳೆದ 8 ವರ್ಷಗಳಿಂದ ನೂರಾರು ಅನಾಥರಿಗೆ, ವೃದ್ಧರಿಗೆ, ನಿರ್ಗತಿಕರಿಗೆ ಆಸರೆಯಾಗಿದ್ದರು. ಇದೀಗ ರಮೇಶ್ ತಮ್ಮ ಪತ್ನಿ, ಮೂವರು ಹೆಣ್ಣು ಮಕ್ಕಳು, ತಂದೆ ಹಾಗೂ ಆಶ್ರಮದಲ್ಲಿ ತಾವು ಆಸರೆಯಾಗಿದ್ದ 36 ಅನಾಥರನ್ನು ಅಗಲಿದ್ದಾರೆ. ಇದನ್ನೂ ಓದಿ: ಪಟಾಕಿ ದುರಂತ ಸ್ಥಳಕ್ಕೆ ಡಿಕೆಶಿ ಭೇಟಿ- ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ
Advertisement
Web Stories