ಚಿಕ್ಕಬಳ್ಳಾಪುರ: ಎಲ್‍ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಕೈಗಾರಿಕಾ ಪ್ರದೇಶದ ಬಾಶೆಟ್ಟಿಹಳ್ಳಿ ಬಳಿ ನಡೆದಿದೆ. ಇದನ್ನೂ ಓದಿ: 80 ಕಡೆ ದುರ್ಗಾಮೂರ್ತಿ ಪ್ರತಿಷ್ಠಾಪನೆಗೆ ಮನವಿ – ದಸರಾ ಮಾರ್ಗಸೂಚಿಗಾಗಿ ಎದುರುನೋಡ್ತಿರುವ ಬಿಬಿಎಂಪಿ
Advertisement
ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಮನೆಯ ಮೇಲ್ಛಾವಣಿ ಪೀಸ್, ಪೀಸ್ ಆಗಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಐವರು ಗಾಯಗೊಂಡಿದ್ದು ಗಾಯಾಳುಗಳನ್ನು ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಆಸ್ಪತ್ರಗೆ ದಾಖಲಿಸಲಾಗಿದೆ. ಇದನ್ನೂ ಓದಿ: ರೈತರಿಗೆ ದಾಖಲೆ ನೀಡಲು ಸತಾಯಿಸುತ್ತಿದ್ದ ಅಧಿಕಾರಿಗಳಿಗೆ ತರಾಟೆ- ಸೂ….ಮಕ್ಕಳು ಎಂದ ರಮೇಶ್ ಕುಮಾರ್
Advertisement
Advertisement
ಗಾಯಾಳುಗಳನ್ನು ಬೀನುಮಂಡಲ್(25), ಶೋಭಾನ್ ಮಂಡಲ್ ಮಗ (3), ಮೋನಿಕಾ ಮಂಡಲ್ ಹೆಂಡತಿ(21), ಬೋಲಾನಾಥ್ ವೃದ್ಧ(60), ಶೋಭಿತಾ ಮಂಡಲ್(55) ವೃದ್ಧೆ ಎಂದು ಗುರುತಿಸಲಾಗಿದೆ. ಗಾಯಾಳುಗಳು ಪಶ್ಚಿಮ ಬಂಗಾಳದ ನಿವಾಸಿಗಳಾಗಿದ್ದು, ಕಳೆದ ನಾಲ್ಕು ತಿಂಗಳಿನಿಂದ ಈ ಮನೆಯಲ್ಲಿ ವಾಸವಾಗಿದ್ದರು.
Advertisement