ಬೆಂಗಳೂರು: ಯುಪಿಎ (UPA) ಸರ್ಕಾರದ ಅವಧಿಯಲ್ಲಿ ಗ್ಯಾಸ್ ಬೆಲೆ ಎಷ್ಟು ಇತ್ತು ಎಂದು ಕಾಂಗ್ರೆಸ್ (Congress) ಸ್ನೇಹಿತರು ಮೊದಲು ನೋಡಿಕೊಳ್ಳಲಿ ಎಂದು ಕಾಂಗ್ರೆಸ್ ನಾಯಕರಿಗೆ ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿರುಗೇಟು ನೀಡಿದರು.ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಹಗರಣ – ಮಾಜಿ ಅಧ್ಯಕ್ಷ ಮಂಜುನಾಥ್ ಗೌಡ ಅರೆಸ್ಟ್
ಗ್ಯಾಸ್ ಬೆಲೆ 50 ರೂ. ಹೆಚ್ಚಳಕ್ಕೆ ಕಾಂಗ್ರೆಸ್ ವಿರೋಧ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, 2004ರಿಂದ 2014ರವರೆಗೆ ಕಾಂಗ್ರೆಸ್‌ನ ಯುಪಿಎ ಸರ್ಕಾರ ಅಧಿಕಾರದಲ್ಲಿತ್ತು. ಕಾಂಗ್ರೆಸ್ ಸ್ನೇಹಿತರು ಗಣಿತ ಸರಿಯಾಗಿ ಓದಿಲ್ಲ ಅನ್ನಿಸುತ್ತದೆ. ಯುಪಿಎ ಅಧಿಕಾರದಲ್ಲಿದ್ದಾಗ ಒಂದು ಎಲ್‌ಪಿಜಿ ಸಿಲಿಂಡರ್‌ನ ಬೆಲೆ 1,241 ರೂ. ಇತ್ತು. ಈಗ ನರೇಂದ್ರ ಮೋದಿ (Narendra Modi) ಸರ್ಕಾರದಲ್ಲಿ 854 ರೂ. ಇದೆ. 50 ರೂ. ಜಾಸ್ತಿ ಮಾಡಿದ ಮೇಲೆಯೂ ಗ್ಯಾಸ್ ಬೆಲೆ 850 ರೂ. ಮಾತ್ರ ಇದೆ. ಇದನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಲಾರಿ, ಬೈಕ್, ಅಂಬುಲೆನ್ಸ್ ನಡುವೆ ಸರಣಿ ಅಪಘಾತ – ಬಿಎಸ್‌ಎಫ್ ಯೋಧ ಸ್ಥಳದಲ್ಲೇ ಸಾವು