ಬೆಂಗಳೂರು: ರಾಜ್ಯ ಸಹಕಾರಿ ರತ್ನ ಪ್ರಶಸ್ತಿ ವಿಜೇತ ಹಿರಿಯ ಕಾಂಗ್ರೆಸ್ ಮುಖಂಡ, ಮಂಡ್ಯ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ಕೆ.ಪುಟ್ಟಸ್ವಾಮಿ (B.K.Puttaswamy Gowda) ಆವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಆತ್ಮೀಯರು ಹಾಗೂ ಹಲಗೂರಿನ ಕಾಂಗ್ರೆಸ್ ಮುಖಂಡರಾದ ಶ್ರೀ ಬಿ.ಕೆ. ಪುಟ್ಟಸ್ವಾಮಿ ಗೌಡ ಅವರು ದೈವಾಧೀನರಾದ ವಿಷಯ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಇಂದು ಬೆನಮನಹಳ್ಳಿಯ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ಹೇಳಿದೆ. pic.twitter.com/FeecT0TlSo
— DK Shivakumar (@DKShivakumar) September 24, 2022
Advertisement
ಮಳವಳ್ಳಿ (Malavalli) ಪಿಎಲ್‌ಡಿ ಬ್ಯಾಂಕ್ ಮಾಜಿ ನಿರ್ದೇಶಕರು, ತಾಲೂಕು ಬೋರ್ಡ್ ಮಾಜಿ ಸದಸ್ಯರು, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷರು ಆಗಿದ್ದ ಪುಟ್ಟಸ್ವಾಮಿ ಅವರು ನೇರ ನಡೆ, ನುಡಿಯ ವ್ಯಕ್ತಿತ್ವ ಹೊಂದಿದ್ದರು. ಕಾಂಗ್ರೆಸ್ (Congress) ಪಕ್ಷದ ನಿಷ್ಠಾವಂತ ಮುಖಂಡರಾಗಿದ್ದರು. ಹಿರಿಯ ಮಾರ್ಗದರ್ಶಕರೂ ಆಗಿದ್ದರು. ಅವರ ನಿಧನ ಅತೀವ ನೋವು ತಂದಿದೆ. ಪಕ್ಷಕ್ಕೆ ನಷ್ಟವಾಗಿದೆ ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಗಾಂಜಾ ದಂಧೆಕೋರರಿಂದಲೇ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ – ICUನಲ್ಲಿ ಸಿಪಿಐ
Advertisement
Advertisement
ಪುಟ್ಟಸ್ವಾಮಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು, ಬಂಧುಗಳು, ಅಭಿಮಾನಿಗಳಿಗೆ ಆ ಭಗವಂತ ನೀಡಲಿ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.