ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆಯನ್ನು ಜ.22 ಕ್ಕೆ ಸುಪ್ರೀಂ ಕೋರ್ಟ್ (Supreme Court) ಮುಂದೂಡಿದೆ.
ಇಂದು ಸುಪ್ರೀಂ ಕೋರ್ಟ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅರ್ಜಿ ವಿಚಾರಣೆ ನಡೆಸಿತು. ವಿಚಾರಣೆ ವೇಳೆ, ಕೌಂಟರ್ ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿತು. ಇದನ್ನೂ ಓದಿ: ಉದ್ದವ್ ಜೊತೆ ಮೈತ್ರಿ ಕಡಿತಗೊಳಿಸಿ – ಕಾಂಗ್ರೆಸ್, ಶರದ್ ಪವರ್‌ಗೆ ಉಲೇಮಾ ಮಂಡಳಿ ಒತ್ತಾಯ
ಡಿಕೆಶಿ ಮೇಲಿನ ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಸರ್ಕಾರದ ನಿರ್ಧಾರ ಪ್ರಶ್ನಿಸಿ ಯತ್ನಾಳ್ ಹಾಗೂ ಸಿಬಿಐ ಇಬ್ಬರೂ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.
ಕೊನೆಗೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಯತ್ನಾಳ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಬೆಜೆಪಿ ರೆಬೆಲ್ ತಂಡದಿಂದ ಫಡ್ನವಿಸ್ ಭೇಟಿ