ಬೆಂಗಳೂರು: ಸಿದ್ದರಾಮಯ್ಯನವರ ಸಿದ್ದರಾಮೋತ್ಸವಕ್ಕೆ ಭರ್ಜರಿ ಕೌಂಟರ್ ಕೊಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.
Advertisement
ಹಳೆ ಮೈಸೂರು ಭಾಗದಲ್ಲಿ ಅದ್ದೂರಿ ಕೆಂಪೇಗೌಡರ ಉತ್ಸವಕ್ಕೆ ಒಕ್ಕಲಿಗ ಸಮುದಾಯದ ನಾಯಕರು ಹಾಗೂ ಸ್ವಾಮೀಜಿಗಳು ಆಸಕ್ತಿ ತೋರುತ್ತಿದ್ದಾರೆ ಎಂಬ ಸುದ್ದಿ ಕೇಳಿಬಂದಿದ್ದು, ಸಮುದಾಯದ ವತಿಯಿಂದ ಕೆಂಪೇಗೌಡ ಉತ್ಸವದ ಅಂಗವಾಗಿ ಬೃಹತ್ ಸಮಾವೇಶ ನಡೆಸಿದರೆ ಸಮಾವೇಶದ ಸಂಪೂರ್ಣ ಜವಾಬ್ದಾರಿ ಹೊರಲು ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಭಾರೀ ಮಳೆಗೆ ಕಳಸ, ಹೊರನಾಡು ಸಂಪರ್ಕ ಕಡಿತ – ಬೆಳ್ತಂಗಡಿ ಶಾಲಾ, ಕಾಲೇಜುಗಳಿಗೆ ರಜೆ
Advertisement
Advertisement
ಈ ಮೂಲಕ, ರಾಜಕೀಯ ಎದುರಾಳಿಗಳಿಗೆ ತಮ್ಮ ಸಮುದಾಯದ ಶಕ್ತಿ ಹಾಗೂ ಬೆಂಬಲದ ಸಂದೇಶ ರವಾನಿಸುವುದು ಡಿಕೆಶಿ ಲೆಕ್ಕಾಚಾರವಾಗಿದೆ. ಈ ಮಧ್ಯೆ ಸಿದ್ದರಾಮಯ್ಯ ಅಮೃತ ಮಹೋತ್ಸವದ ಮಾಹಿತಿಯನ್ನ ಅಮೃತ ಮಹೋತ್ಸವ ಸಮಿತಿ ಇಂದು ಅಧಿಕೃತವಾಗಿ ಪ್ರಕಟಿಸಲಿದೆ. ಇದನ್ನೂ ಓದಿ: ಜುಲೈ 12ಕ್ಕೆ ಚಾಮರಾಜಪೇಟೆ ಬಂದ್ – ಬೆಂಬಲ ನೀಡಲು ಮುಸ್ಲಿಂ ವ್ಯಾಪಾರಿಗಳು ನಿರಾಕರಣೆ
Advertisement
ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಬೆಳಗ್ಗೆ 10ಕ್ಕೆ ಸಭೆ ನಡೆಯಲಿದೆ. ಆರ್.ವಿ.ದೇಶಪಾಂಡೆ ನೇತೃತ್ವದ ಅಮೃತೋತ್ಸವ ಸಮಿತಿಯ ಸದಸ್ಯರಾದ ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಪಿಜಿಆರ್ ಸಿಂಧ್ಯ, ಜಯಮಾಲ, ಬಿ.ಎಲ್.ಶಂಕರ್, ವಿ.ಆರ್.ಸುದರ್ಶನ್, ಜಮೀರ್ ಅಹಮ್ಮದ್ ಸೇರಿದಂತೆ ಘಟಾನುಘಟಿಗಳು ಸಭೆಯಲ್ಲಿ ಭಾಗಿ ಆಗಲಿದ್ದಾರೆ. ಆಗಸ್ಟ್ 3ರ ಸಮಾವೇಶ, ಪೂರ್ವ ಸಿದ್ಧತೆ ಮಾಹಿತಿ ಹಂಚಿಕೊಳ್ಳಲಿದ್ದಾರೆ.