ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಾಯಕರು ಮುಂದಾದರು. ಈ ವೇಳೆ ಪ್ರತಿಭಟನಾಕಾರರು ತಡೆಯಲು ಹಾಕಿದ್ದ ಬ್ಯಾರಿಕೇಡ್ ಹತ್ತಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪೊಲೀಸರ ಮೇಲೆ ಜಂಪ್ ಮಾಡಿದ ಪ್ರಸಂಗ ನಡೆಯಿತು.
Advertisement
ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕು. ಇಲ್ಲವೇ ಸರ್ಕಾರ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಇಂದು ನಗರದಲ್ಲಿ ರ‍್ಯಾಲಿ ನಡೆಸಿದರು. ಇದೇ ವೇಳೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ರೇಸ್ ವ್ಯೂವ್ ಹೋಟೆಲ್ ಬಳಿ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಈ ವೇಳೆ ಬ್ಯಾರಿಕೇಡ್ ಹತ್ತಿದ ಡಿಕೆಶಿ, ಪೊಲೀಸರ ಮೇಲೆಯೇ ಜಿಗಿದಿದ್ದಾರೆ. ತಕ್ಷಣ ಪೊಲೀಸರು, ಡಿ.ಕೆ.ಶಿವಕುಮಾರ್ ಕೆಳಗೆ ಬೀಳದಂತೆ ಹಿಡಿದುಕೊಂಡಿದ್ದಾರೆ. ನಂತರ ಎಲ್ಲರನ್ನೂ ವಶಕ್ಕೆ ಪಡೆದ ಘಟನೆ ನಡೆಯಿತು. ಇದನ್ನೂ ಓದಿ: ಪ್ರಾಥಮಿಕ ತನಿಖೆ ಮುಗಿಯುವವರೆಗೆ ಈಶ್ವರಪ್ಪ ವಿರುದ್ಧ ಕ್ರಮವಿಲ್ಲ: ಸಿಎಂ
Advertisement
Advertisement
ಕಾಂಗ್ರೆಸ್ ಭವನದಿಂದ ಹೊರಟ ಪ್ರತಿಭಟನಾಕಾರರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು, ಕಾಂಗ್ರೆಸ್ ನಾಯಕರ ಮನವೊಲಿಸಲು ಪ್ರಯತ್ನಿಸಿದರು. ಬೆಂಗಳೂರು ಕೇಂದ್ರ ಡಿಸಿಪಿ ಅನುಚೇತ್ ಸದಾಶಿವನಗರದಲ್ಲಿ ಡಿಕೆಶಿ ನಿವಾಸಕ್ಕೆ ಭೇಟಿ ಮಾಡಿದ್ದರು. ಆದರೆ ಅವರ ಮನವೊಲಿಕೆಗೆ ಬಗ್ಗದ ಕಾಂಗ್ರೆಸ್ ನಾಯಕರು ರ‍್ಯಾಲಿ ನಡೆಸಿದರು. ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕ ಪ್ರಿಯಾಂಕ್ ಖರ್ಗೆ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಈಶ್ವರಪ್ಪ ರಾಜೀನಾಮೆ ಕೊಡಬಾರದು: ಸಚಿವ ನಿರಾಣಿ