ನವದೆಹಲಿ: 40 ಪರ್ಸೆಂಟ್ ಟೆಂಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಕಾರ್ಯಾಲಯದಿಂದ ವರದಿ ಕೇಳುವುದರಲ್ಲಿ ಏನಿಲ್ಲ. ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Advertisement
ನವದೆಹಲಿಯಲ್ಲಿ ಈ ಕುರಿತು ಮಾತನಾಡಿದ ಡಿಕೆಶಿ, ಗುತ್ತಿಗೆದಾರರ ಸಂಘದ ಕೆಂಪಣ್ಣ ಅವರು ಕಮಿಷನ್ ಅರೋಪ ಮಾಡಿ ಪತ್ರ ಬರೆದಿದ್ದಾರೆ. ಮಂತ್ರಿಗಳ ವಿರುದ್ದ 40% ಕಮಿಷನ್ ಆರೋಪ ಮಾಡಿದ್ದಾರೆ. ಕಾಂಟ್ರಾಕ್ಟರ್ ಅಸೋಸಿಯನ್‌ಗೂ ಪತ್ರ ಬರೆದಿದ್ದಾರೆ. ಪ್ರಧಾನಿ ಕಾರ್ಯಾಲಯದಿಂದ ಈಗ ವರದಿ ಕೇಳುವುದರಲ್ಲಿ ಏನಿದೆ? ಪ್ರಮುಖವಾಗಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಯಬೇಕು. ಅದನ್ನು ಬಿಟ್ಟು ವರದಿ ಏನು ಕೇಳೋದು ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: 40% ಕಮಿಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಗುತ್ತಿಗೆದಾರರ ಸಂಘದಿಂದ ದಾಖಲೆ ಕೇಳಿದ ಕೇಂದ್ರ ಗೃಹ ಸಚಿವಾಲಯ
Advertisement
Advertisement
ಇಡಿ ಸಮನ್ಸ್ ವಿಚಾರವಾಗಿ ಪ್ರತಿಕ್ರಿಯಿಸಿ, ಜೈಲಿನಿಂದ ಬಂದ 6 ತಿಂಗಳಲ್ಲಿ ಚಾರ್ಜ್‌ಶೀಟ್ ಹಾಕಬೇಕಿತ್ತು. ನನಗೆ ಚಾರ್ಜ್‌ಶೀಟ್ ಸಿಕ್ಕಿಲ್ಲ. ಚಾರ್ಜ್‌ಶೀಟ್‌ನಲ್ಲಿ ಏನಿದೆ ಅಂತಾ ನನಗೇ ಗೊತ್ತಿಲ್ಲ. ಚಾರ್ಜ್‌ಶೀಟ್ ಸಿಕ್ಕಮೇಲೆ ನಾನು ಹೇಳುತ್ತೇನೆ ಎಂದಿದ್ದಾರೆ.