– ನನಗೆ ರಾಜಕೀಯವಾಗಿ ಜೀವಕೊಟ್ಟ ತಾಲ್ಲೂಕು ಎಂದ ಡಿಸಿಎಂ
ಬೆಂಗಳೂರು: ನನಗೆ ರಾಜಕೀಯವಾಗಿ ಜೀವಕೊಟ್ಟ ತಾಲ್ಲೂಕು. ಐ ವಾಂಟ್ ಟು ಡೆವೆಲಪ್ ಚನ್ನಪಟ್ಟಣ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಹೇಳಿದರು. ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧೆ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಡಿಕೆಶಿ, ಚನ್ನಪಟ್ಟಣ (Channapatna) ನನ್ನ ಹೃದಯಲ್ಲಿದೆ. ಸಾತನೂರು ಚನ್ನಪಟ್ಟಣದ ಒಂದು ಭಾಗ. ಐ ವಾಂಟ್ ಟು ಲವ್ ಚನ್ನಪಟ್ಟಣ. ಐ ವಾಂಟ್ ಟು ಡೆವೆಲಪ್ ಚನ್ನಪಟ್ಟಣ. ನನಗೆ ರಾಜಕೀಯವಾಗಿ ಜೀವಕೊಟ್ಟ ತಾಲೂಕು. ನಾಲ್ಕು ಬಾರಿ ಹೋಬಳಿ ಮಟ್ಟದಲ್ಲಿ ಆಶೀರ್ವಾದ ಮಾಡಿದ್ದರು. ಚನ್ನಪಟ್ಟಣ ಜನರ ಋಣ ತೀರಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಸ್‌ಪಿಪಿ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಪರಮೇಶ್ವರ್
ಚನ್ನಪಟ್ಟಣದಿಂದ ಸ್ಪರ್ಧೆ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ. ಚನ್ನಪಟ್ಟಣ ನನ್ನ ಹೃದಯದಲ್ಲಿದೆ. ಕ್ಷೇತ್ರದ ಜನರ ಮೇಲೆ ನನಗೆ ಪ್ರೀತಿಯಿದೆ. ಆ ಜನರ ಋಣ ತೀರಿಸಬೇಕು. ಕನಕಪುರಕ್ಕಿಂತ ಹೆಚ್ಚಿನ ಅಭಿವೃದ್ಧಿ ಮಾಡುತ್ತೇನೆ. ಇವತ್ತು ಅಲ್ಲಿನ ದೇವಸ್ಥಾನಗಳ ಭೇಟಿ ಮಾಡಿ ಆಶೀರ್ವಾದ ಪಡೆಯುತ್ತೇನೆ. ಮತದಾರರ ಭೇಟಿ ಮಾಡಿ ಮಾತನಾಡುತ್ತೇನೆ. ಮತದಾರರು ನನ್ನ ಬಗ್ಗೆ ಒಲವು ಇಟ್ಟುಕೊಂಡರೆ ವಿಧಿನೆ ಇಲ್ಲಾ. ನಮ್ಮ ಪಕ್ಷದ ನಾಯಕರು, ಮತದಾರರು ಏನು ಹೇಳ್ತಾರೆ ಅದನ್ನ ಕೇಳುತ್ತೇನೆ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ವಿಚಾರವಾಗಿ ಮಾತನಾಡಿ, ಕಳೆದ 10 ವರ್ಷಗಳಿಂದ ದರ ಏರಿಸಿಲ್ಲ. 10 ವರ್ಷಗಳಿಂದ ಪವರ್ ಬಿಲ್ ಹೆಚ್ಚಾಗಿದೆ. ವಿದ್ಯುತ್ ದರ ಏರಿಕೆ ಮಾಡ್ತಾನೇ ಇದ್ದಾರೆ. ಆದರೆ ನೀರಿನ ದರ ಏರಿಕೆ ಮಾಡಿಲ್ಲ. ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಿದೆ. ಹಾಗಾಗಿ ದರ ಏರಿಕೆಯ ಬಗ್ಗೆ ಚಿಂತನೆ ನಡೆದಿದೆ. ದರ ಏರಿಕೆ ಬಗ್ಗೆ ಪರಿಶೀಲನೆ ನಡೆದಿದೆ. ಏಳೆಂಟು ದಿನಗಳೊಳಗೆ ಒಂದು ಪ್ರಸ್ತಾವನೆ ರೆಡಿಯಾಗಲಿದೆ. ದರ ಏರಿಕೆಯ ಬಗ್ಗೆ ಎಗ್ಸಾಮಿನ್ ಮಾಡ್ತೇವೆ. ನಂತರ ದರ ಏರಿಕೆ ಬಗ್ಗೆ ನಿರ್ಧಾರ ಮಾಡ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ: ಪರಮೇಶ್ವರ್