Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರು ನಿಗದಿ ಮಾಡಲು ಡಿಕೆಶಿ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರು ನಿಗದಿ ಮಾಡಲು ಡಿಕೆಶಿ ಮನವಿ

Karnataka

ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರು ನಿಗದಿ ಮಾಡಲು ಡಿಕೆಶಿ ಮನವಿ

Public TV
Last updated: December 24, 2025 5:42 pm
Public TV
Share
5 Min Read
d.k.shivakumar
SHARE

* ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಲು ಮನವಿ
* ಗೋದಾವರಿ- ಕಾವೇರಿ ನದಿ ಜೋಡಣೆಯಲ್ಲಿ 15.90, ಬೇಡ್ತಿ-ವರದಾ ಯೋಜನೆಯಲ್ಲಿ 18.50 ಟಿಎಂಸಿ ಸೇರಿ ರಾಜ್ಯಕ್ಕೆ 34.40 ಟಿಎಂಸಿ ನೀರು
* ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚೆ
* ಬೆಂಗಳೂರಿನ ಮೆಟ್ರೋ ಸೇರಿ ಇತರೆ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್ ಜೊತೆ ಚರ್ಚೆ

ನವದೆಹಲಿ: ನದಿ ಜೋಡಣೆ ಯೋಜನೆಯಲ್ಲಿ ನಮ್ಮ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರನ್ನು ನೀಡಬೇಕು. ಗೋದಾವರಿ- ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ತಿಳಿಸಿದರು.

ದೆಹಲಿಯ ಕರ್ನಾಟಕ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಮಾತನಾಡಿದರು. ನದಿ ಜೋಡಣೆ ವಿಚಾರವಾಗಿ ಕೇಂದ್ರ ಜಲಶಕ್ತಿ ಸಚಿವರ ನೇತೃತ್ವದಲ್ಲಿ ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆಯನ್ನು ರಚಿಸಲಾಗಿದ್ದು, ಎಲ್ಲಾ ರಾಜ್ಯಗಳು ಅದರ ಸದಸ್ಯರಾಗಿರುತ್ತವೆ. ಮಂಗಳವಾರ ಇದರ 24ನೇ ಸಭೆ ನಡೆದಿದ್ದು, ನಮ್ಮ ರಾಜ್ಯಕ್ಕೆ ಸಂಬಂಧಿಸಿದಂತೆ ಗೋದಾವರಿ ಹಾಗೂ ಕಾವೇರಿ, ಬೇಡ್ತಿ ಹಾಗೂ ವರದಾ ನದಿ ಜೋಡಣೆ ಬಗ್ಗೆ ಚರ್ಚೆ ನಡೆದಿದೆ ಎಂದರು.

ಗೋದಾವರಿ ಹಾಗೂ ಕಾವೇರಿ ನದಿ ಜೋಡಣೆ ಯೋಜನೆಯ ಮೊದಲ ಹಂತದಲ್ಲಿ 148 ಟಿಎಂಸಿ ನೀರನ್ನು ತಿರುಗಿಸಲಾಗುತ್ತಿದ್ದು, ಇದರಲ್ಲಿ ಕರ್ನಾಟಕಕ್ಕೆ ನಿಗದಿ ಮಾಡಿರುವುದು ಕೇವಲ 15.90 ಟಿಎಂಸಿ ನೀರು ಮಾತ್ರ. ನೀರನ್ನು ಯಾವ ಕಡೆ ನೀಡುತ್ತೀರಿ ಹಾಗೂ ಅದನ್ನು ಹೇಗೆ ಉಪಯೋಗಿಸಬೇಕು ಎಂಬ ಬೇಡಿಕೆ ಸಭೆಯ ಮುಂದಿಟ್ಟಿದ್ದೇವೆ. ಬೇಡ್ತಿ ಹಾಗೂ ವರದಾ ನದಿ ಜೋಡಣೆ ನಮ್ಮ ರಾಜ್ಯದೊಳಗೆ ಮಾಡಲಿದ್ದು, 18.50 ಟಿಎಂಸಿ ನೀರನ್ನು ಬಳಸಿಕೊಳ್ಳಲು ಅವಕಾಶ ಇದೆ. ಈ ಎರಡೂ ಯೋಜನೆಗಳಿಂದ ಕರ್ನಾಟಕಕ್ಕೆ ಒಟ್ಟು 34.40 ಟಿಎಂಸಿ ನೀರನ್ನು ನಿಗದಿ ಮಾಡಲಾಗಿದೆ. ಬೇಡ್ತಿ ಹಾಗೂ ವರದಾ ನದಿ ಜೋಡಣೆಗೆ ಡಿಪಿಆರ್ ತಯಾರಿಸಲು ನಾವು ಅನುಮತಿಯನ್ನು ನೀಡಿದ್ದೇವೆ. ಇದಕ್ಕೆ 10 ಸಾವಿರ ಕೋಟಿ ವೆಚ್ಚವಾಗಲಿದ್ದು, ಇದರಲ್ಲಿ 90% ಕೇಂದ್ರ ಸರ್ಕಾರ ಹಾಗೂ 10% ರಾಜ್ಯ ಸರ್ಕಾರ ಭರಿಸಲಿದೆ ಎಂದು ಮಾಹಿತಿ ನೀಡಿದರು.

ರಾಜ್ಯದ ಭದ್ರಾ ಮೇಲ್ದಂಡೆ, ಮೇಕೆದಾಟು, ಕೃಷ್ಣಾ ಮೇಲ್ದಂಡೆ, ಎತ್ತಿನಹೊಳೆ ಸೇರಿದಂತೆ ಹಲವಾರು ನೀರಾವರಿ ಯೋಜನೆಗಳು ಹಾಗೂ ಮೆಟ್ರೋ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ಅನುಮತಿಗಳ ಕುರಿತು ಬೇಡಿಕೆಗಳ ಬಗ್ಗೆ ಕೇಂದ್ರದ ಸಚಿವರೊಂದಿಗೆ ಜೊತೆಗೆ ಚರ್ಚಿಸಿದ ವಿಷಯಗಳ ಕುರಿತು, ಇಂದು ದೆಹಲಿಯ ಕರ್ನಾಟಕ ಭವನದಲ್ಲಿ… pic.twitter.com/TPHtYCo3S1

— DK Shivakumar (@DKShivakumar) December 24, 2025

ಸುಪ್ರೀಂ ಕೋರ್ಟ್ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಎರಡು ತಿಂಗಳಲ್ಲಿ ಸಲ್ಲಿಕೆ ಮಾಡುತ್ತೇವೆ ಎಂದು ಕೇಂದ್ರ ಸಚಿವರ ಬಳಿ ತಿಳಿಸಿದ್ದೇನೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಲಾಗಿರುವ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದೇನೆ. ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು. ಇದರ ಸಂಬಂಧ ಈಗಾಗಲೇ ಎರಡು ಬಾರಿ ಸಭೆ ಮುಂದೂಡಲ್ಪಟ್ಟಿದೆ. ಮಹದಾಯಿ ವಿಚಾರವಾಗಿ ಅಧಿಕಾರಿಗಳು ಸಭೆ ಮಾಡಿದ್ದಾರೆ. ಈ ಯೋಜನೆ ವಿಚಾರದಲ್ಲಿ ಅರಣ್ಯ ಇಲಾಖೆ ಮೇಲೆ ಒತ್ತಡ ಹಾಕುವಂತೆ ಕೇಳಿದ್ದೇವೆ ಎಂದರು.

ಕೇಂದ್ರ ಸಚಿವರು ನನಗೆ ಮತ್ತೊಂದು ದಿನ ಭೇಟಿಗೆ ಸಮಯಾವಕಾಶ ನೀಡುತ್ತೇನೆ. ಜಲ ಜೀವನ್ ಮಿಷನ್ ಯೋಜನೆಯಿಂದ ಹಿಡಿದು ಕರ್ನಾಟಕಕ್ಕೆ ಸಂಬಂಧಿಸಿದ ಎಲ್ಲಾ ವಿಚಾರವಾಗಿ ಚರ್ಚೆ ಮಾಡಲು ತಿಳಿಸಿದ್ದಾರೆ ಎಂದರು.

ಮಂಗಳವಾರ ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ ಕೆಲವು ಯೋಜನೆಗಳಿಗೆ ಬಾಕಿ ಇರುವ ಅನುಮೋದನೆಗೆ ಮನವಿ ಮಾಡಿದ್ದೇನೆ. ಮೆಟ್ರೋ 2ನೇ ಹಂತದ ಯೋಜನೆಗೆ 15 ವರ್ಷಗಳ ಹಿಂದೆ ಅಂದರೆ 2010ರ ಜುಲೈನಲ್ಲಿ ಡಿಪಿಆರ್ ಸಿದ್ಧಪಡಿಸಲಾಗಿತ್ತು. ಆಗ 26 ಸಾವಿರ ಕೋಟಿ ಇದ್ದ ಯೋಜನೆ ವೆಚ್ಚ ಈಗ 40 ಸಾವಿರ ಕೋಟಿಗೆ ಏರಿಕೆಯಾಗಿದೆ. ಭೂಸ್ವಾಧೀನ ಪ್ರಕ್ರಿಯೆಗೆ 2500 ಕೋಟಿ ಹೆಚ್ಚು ವೆಚ್ಚವಾಗಿದೆ. 2026ರ ಡಿಸೆಂಬರ್ ವೇಳೆಗೆ ಈ ಯೋಜನೆ ಪೂರ್ಣಗೊಳಿಸಲಾಗುವುದು. ಹೀಗಾಗಿ, ಈ ಪರಿಷ್ಕೃತ ದರಕ್ಕೆ ಒಪ್ಪಿಗೆ ನೀಡಬೇಕು ಎಂದು ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದೇವೆ ಎಂದು ಹೇಳಿದರು.

ಕೇಂದ್ರ ಸಚಿವರಿಗೆ ಮೆಟ್ರೋ, ಆರ್‌ಆರ್‌ಟಿಎಸ್ ಯೋಜನೆಗಳಿಗೆ ಮನವಿ
ಮೆಟ್ರೋ 3ಎ ಯೋಜನೆಗೆ ಸರ್ಜಾಪುರದಿಂದ ಹೆಬ್ಬಾಳದವರೆಗೆ 36.59 ಕಿ.ಮೀ ಉದ್ದದ ಮಾರ್ಗದಲ್ಲಿ 28 ನಿಲ್ದಾಣಗಳನ್ನು ಒಳಗೊಂಡಿದೆ. ಇದರಲ್ಲಿ 22.14 ಕಿ.ಮೀ ಮೇಲ್ಸೇತುವೆ ಹಾಗೂ 14.45 ಕಿ.ಮೀ ಸುರಂಗ ಪಥದಲ್ಲಿ ಸಾಗಲಿದ್ದು, ಈ ಯೋಜನೆಗೆ ಒಟ್ಟು 28,405 ಕೋಟಿ ರೂ. ಅಂದಾಜು ಮಾಡಲಾಗಿದೆ. ಈ ಯೋಜನೆಗೆ ಜ.15 ರಂದು ಕೇಂದ್ರ ಸಚಿವಾಲಯದ ಒಪ್ಪಿಗೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಅನುಮತಿ ನೀಡಿದರೆ ನಾವು ಕೆಲಸ ಆರಂಭಿಸುತ್ತೇವೆ ಎಂದು ಸಚಿವರಿಗೆ ತಿಳಿಸಿದ್ದೇವೆ. ಇದರ ಪರಿಶೀಲನೆಗೆ ಸಿಸ್ತ್ರ ಎಂಬ ಸಂಸ್ಥೆಗೆ ವಹಿಸಲಾಗಿದೆ. ಅದರ ಶಿಫಾರಸಿಗೆ ನಾವು ಬದ್ಧವಾಗಿದ್ದೇವೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಪ್ರಾದೇಶಿಕ ಕ್ಷಿಪ್ರ ಸಂಚಾರ ವ್ಯವಸ್ಥೆಗೆ ಮನವಿ ಮಾಡಲಾಗಿದೆ. ಬಿಡದಿ-ಮೈಸೂರು, ಹಾರೋಹಳ್ಳಿ-ಕನಕಪುರ, ನೆಲಮಂಗಲ-ತುಮಕೂರು, ವಿಮಾನ ನಿಲ್ದಾಣ-ಚಿಕ್ಕಬಳ್ಳಾಪುರ, ಹೊಸಕೋಟೆ-ಕೋಲಾರ ಮಧ್ಯೆ ಈ ಸಂಚಾರ ವ್ಯವಸ್ಥೆ ನಿರ್ಮಿಸಲು ಡಿಪಿಆರ್ ತಯಾರಿಸಲು ಮನವಿ ಮಾಡಿದ್ದೇವೆ. ಬೆಂಗಳೂರಿ ದಟ್ಟಣೆ ಹಾಗೂ ಒತ್ತಡ ಕಡಿಮೆ ಮಾಡಲು ಈ ಭಾಗದಲ್ಲಿ ಸ್ಯಾಟಲೈಟ್ ಟೌನ್ ನಿರ್ಮಿಸಬೇಕು ಎಂದು ಈ ಯೋಜನೆಗೆ ಮನವಿ ಮಾಡಿದ್ದು, ಇದನ್ನು ಪರಿಗಣಿಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ಬೆಂಗಳೂರಿಗೆ ಶಕ್ತಿ ತುಂಬದಿದ್ದರೆ ದೇಶಕ್ಕೆ ಅಪಮಾನ ಮಾಡಿದಂತಾಗುತ್ತದೆ. ಬೆಂಗಳೂರು ಜಾಗತಿಕ ನಗರವಾಗಿ ಬೆಳೆಯುತ್ತಿದೆ ಎಂದು ಮನದಟ್ಟು ಮಾಡಿದ್ದೇನೆ ಎಂದರು.

ಟನಲ್ ರಸ್ತೆ ರಾಜ್ಯ ಸರ್ಕಾರದ ಯೋಜನೆ
ಟನಲ್ ರಸ್ತೆ ಬಗ್ಗೆ ಚರ್ಚೆ ಮಾಡಿದ್ದೀರಾ ಎಂದು ಕೇಳಿದಾಗ, ಟನಲ್ ಯೋಜನೆಗೂ ಕೇಂದ್ರ ಸರ್ಕಾರಕ್ಕೂ ಸಂಬಂಧವಿಲ್ಲ. ಇದು ಸಂಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆಯಾಗಿದೆ. ಈ ಯೋಜನೆಗೆ ಎರಡು ಮೂರು ಸಂಸ್ಥೆಗಳು ಬಿಡ್ ಮಾಡಿವೆ. ಪತ್ರಿಕೆಗಳ ವರದಿಗಳ ಮೂಲಕ ಯಾರು ಹಾಕಿದ್ದಾರೆ ಎಂದು ನೋಡಿದ್ದೇನೆ. ಟನಲ್ ರಸ್ತೆ ಯೋಜನೆಯನ್ನು ಬಿಲ್ಡ್ ಆಪರೇಟ್ ಟ್ರಾನ್ಸ್‌ಪೋರ್ಟ್ ಮಾದರಿಯಲ್ಲಿ ಮಾಡಬೇಕಾಗಿದೆ. ಇದು ರಿಸ್ಕ್ ಇರುವ ಯೋಜನೆ ಎಂದು ಗೊತ್ತಿದೆ. ಅವರೇ ಬಂಡವಾಳ ಹಾಕಿ ಈ ಯೋಜನೆ ಮಾಡಬೇಕಿದೆ. ಬ್ಯಾಂಕರ್‌ಗಳು ಬಂದು ನಮಗೆ ಮನವಿ ಮಾಡಿದರು. ಅದಕ್ಕೆ ನಾವು ನೀವು ಯಾರಿಗಾದರೂ ಫೈನಾನ್ಸ್ ಮಾಡಿ ಎಂದು ಹೇಳಿದ್ದೇವೆ. ಕೆಲವರಿಗೆ ಗಾಬರಿ ಇದೆ. ಮತ್ತೊಂದು ಕಡೆ ಒಂದೂವರೆ ಕಿಲೋಮೀಟರ್ ಟನಲ್ ರಸ್ತೆಗೆ ಮುಂದಾಗಿದ್ದು, ಇದರಿಂದ ಸುಮಾರು 25% ಸಂಚಾರ ದಟ್ಟಣೆ ನಿವಾರಣೆಯಾಗಲಿದೆ ಎಂದು ತಿಳಿಸಿದರು.

TAGGED:d k shivakumarRiver Linking Projectಡಿ.ಕೆ.ಶಿವಕುಮಾರ್ನದಿ ಜೋಡಣೆ ಯೋಜನೆ
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Raichuru Crime
Court

ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
8 minutes ago
Chalavadi narayanaswamy
Bengaluru City

ಕಾಂಗ್ರೆಸ್‌ ಅಧಿಕಾರದಲ್ಲಿದ್ರೆ ಮನೆ-ಮನೆಗಳಲ್ಲಿ ಚುನಾವಣೆ ಮಾಡಿ ಗಂಡ-ಹೆಂಡ್ತಿಗೆ ಜಗಳ ತಂದಿಡ್ತಾರೆ: ಛಲವಾದಿ ಕಿಡಿ

Public TV
By Public TV
29 minutes ago
Yadagiri UPSC Student
Districts

UPSC ಪರೀಕ್ಷೆಯಲ್ಲಿ ರ‍್ಯಾಂಕ್ ಗಿಟ್ಟಿಸಿಕೊಂಡ ಯಾದಗಿರಿಯ ನಾಲ್ವರು

Public TV
By Public TV
39 minutes ago
women falls pit bengaluru
Bengaluru City

ಬೆಂಗಳೂರು| ಕಾಲು ಜಾರಿ 25 ಅಡಿ ಆಳದ ಗುಂಡಿಗೆ ಬಿದ್ದ ಮಹಿಳೆ – 8 ಗಂಟೆ ಗುಂಡಿಯಲ್ಲೇ ಪರದಾಟ

Public TV
By Public TV
1 hour ago
Siddaramaiah
Bengaluru City

ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ – LPG ದರ ಏರಿಕೆಗೆ ಸಿಎಂ ಕಿಡಿ

Public TV
By Public TV
2 hours ago
Indias energy supplies
Latest

ನಮಗೆ ಯಾರ ಅಪ್ಪಣೆಯೂ ಬೇಕಿಲ್ಲ: ರಷ್ಯಾ ತೈಲ ಖರೀದಿಗೆ ಅಮೆರಿಕ ವಿನಾಯಿತಿ ಬಗ್ಗೆ ಭಾರತ ಖಡಕ್‌ ಮಾತು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?