ಬೆಂಗಳೂರು: ತುಂಗಾಭದ್ರಾ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D K Shivakumar) ತಿಳಿಸಿದರು.
ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬಸನಗೌಡ ಬಾದರ್ಲಿ ಅವರು, ತುಂಗಾಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿದೆ ಆದ ಕಾರಣಕ್ಕೆ ನವಲಿ ಜಲಾಶಯ ನಿರ್ಮಾಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಪ್ರಶ್ನೆ ಕೇಳಿದರು. ಇದನ್ನೂ ಓದಿ: ಎಂಇಎಸ್ ನಿಷೇಧಕ್ಕೆ ಒತ್ತಾಯ – ಪೊರಕೆ ಹಿಡಿದು ವಾಟಾಳ್ ನಾಗರಾಜ್ ಪ್ರತಿಭಟನೆ
ಪ್ರಶ್ನೆಗೆ ಉತ್ತರಿಸಿದ ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ನಮ್ಮ ಅಧಿಕಾರಿಗಳು ಸಮತೋಲಿತ ಅಣೆಕಟ್ಟು ನಿರ್ಮಾಣ ಮಾಡದೇ ಪರ್ಯಾಯವಾದ ಆಲೋಚನೆ ತಿಳಿಸಿದ್ದಾರೆ. ನಮ್ಮ ಪಾಲಿನ ನೀರನ್ನು ಪಂಪ್ ಮಾಡಿಕೊಂಡು ಬಳಸಿಕೊಳ್ಳುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ಇದರಿಂದ ಮೂರು ರಾಜ್ಯಗಳಿಗೆ ಉಪಯೋಗವಾಗಲಿದೆ. ನಮಗೆ ಶೇ.65 ರಷ್ಟು ನೀರು, ಅವರಿಗೆ ಶೇ.35 ರಷ್ಟು ನೀರು ಉಪಯೋಗವಾಗಲಿದೆ. ಸಮತೋಲಿತ ಅಣೆಕಟ್ಟು ನಿರ್ಮಾಣ ಹಾಗೂ ಹೊಸ ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಸಲ್ಲಿಸುತ್ತೇವೆ. ನಾವು ನಮ್ಮ ಪಾಲಿನ ನೀರು ಉಳಿಸಿಕೊಳ್ಳಲು ಬದ್ಧವಾಗಿದ್ದೇವೆ ಎಂದರು. ಇದನ್ನೂ ಓದಿ: ಬೆಂಗಳೂರಿನ ಬೆಡಗಿ ಜೊತೆ ಡೇಟಿಂಗ್ ಮಾಡ್ತಿದ್ದೀನಿ: ಪಾರ್ಟಿಯಲ್ಲಿ ಗೆಳತಿ ಬಗ್ಗೆ ಆಮೀರ್ ಮಾತು
ಇದಕ್ಕಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಹಾಗೂ ಪಂಪ್ ಮಾಡಿ ನೀರು ಬಳಸಿಕೊಳ್ಳುವ ಪರ್ಯಾಯ ಯೋಜನೆ ಬಗ್ಗೆ ಸರ್ಕಾರ ಆಲೋಚಿಸುತ್ತಿದೆ. ಮಾ. 18ರಂದು ಕೇಂದ್ರ ಜಲಶಕ್ತಿ ಸಚಿವರು ಪೆನ್ನಾರ್ ನದಿ ವಿಚಾರವಾಗಿ ನಮ್ಮನ್ನು ಹಾಗೂ ತಮಿಳುನಾಡಿನವರನ್ನು ಚರ್ಚೆಗೆ ಕರೆದಿದ್ದಾರೆ. ಅಂದು ನವಲಿ ಅಣೆಕಟ್ಟು ನಿರ್ಮಾಣ ಹಾಗೂ ಪರ್ಯಾಯ ಪರಿಹಾರಗಳ ಬಗ್ಗೆ ಕೇಂದ್ರ ಸಚಿವರ ಬಳಿ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಜೈಲುಗಳಲ್ಲಿ ಅಕ್ರಮ ಚಟುವಟಿಕೆ ತಡೆಯಲು ವಿಶೇಷ ಕ್ರಮ : ಪರಮೇಶ್ವರ್
ಈ ವಿಚಾರವಾಗಿ ಆಂಧ್ರ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಬಳಿ ಮಾತನಾಡಿ ಪತ್ರ ಕೂಡ ಬರೆದಿದ್ದೇನೆ. ರಾಜಸ್ಥಾನದ ಉದಯಪುರಲ್ಲಿ ನಡೆದ ಸಮಾವೇಶದಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಜಲಸಂಪನ್ಮೂಲ ಸಚಿವರ ಜತೆ ಚರ್ಚೆ ಮಾಡಲಾಗಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿಗಳಿಗೆ ದೂರವಾಣಿ ಕರೆ ಮಾಡಿ ಈ ಯೋಜನೆ ಬಗ್ಗೆ ಪ್ರಾತ್ಯಕ್ಷಿಕೆ ತೋರಿಸಿ ಚರ್ಚೆ ಮಾಡಲು ಸಮಯ ನೀಡಿ ಎಂದು ಕೇಳಿದ್ದೆ. 2 ರಾಜ್ಯಗಳ ಜತೆ ಚರ್ಚೆ ಮಾಡಿದ ನಂತರ ತುಂಗಾಭದ್ರಾ ಮಂಡಳಿ ಮುಂದೆ ಈ ಯೋಜನೆಗಳ ವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದೆ. ಆಂಧ್ರಪ್ರದೇಶ ಸಿಎಂ ಅವರು ಈ ವಿಚಾರವಾಗಿ ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ಬಣ ವೀರರ ಲಿಂಗಾಯತ ಸಭೆಗಳಿಗೆ ಹೈಕಮಾಂಡ್ ಬ್ರೇಕ್ – ಬಿವೈವಿ ವಿರುದ್ಧ ಅಮಿತ್ ಶಾಗೆ ಲಿಂಬಾವಳಿ ದೂರು
ತುಂಗಾಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿರುವ ಕಾರಣಕ್ಕೆ ಸುಮಾರು 25 ರಿಂದ 30 ಟಿಎಂಸಿ ನೀರು ನಮಗೆ ಸಿಗದೇ ವ್ಯರ್ಥವಾಗುತ್ತಿದೆ. ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಸುಮಾರು 15,000 ಎಕ್ರೆ ಭೂಮಿ ಬೇಕಾಗಿದೆ. ಈ ಬಗ್ಗೆ ಈಗಾಗಲೇ ತಾಂತ್ರಿಕ ವರದಿಗಳನ್ನು ಹಾಗೂ ಡಿಪಿಆರ್ ಕೂಡಾ ತಯಾರಾಗಿದೆ. ಇದನ್ನು ತುಂಗಾಭದ್ರಾ ಬೋರ್ಡ್ ಹಾಗೂ ಆಂಧ್ರ, ತೆಲಂಗಾಣ ರಾಜ್ಯಗಳಿಗೂ ಕಳುಹಿಸಲಾಗಿದೆ ಎಂದರು. ಇದನ್ನೂ ಓದಿ: 83,00,00,00,00,000 ಕ್ರಿಪ್ಟೋ ವಂಚನೆ – ಕೇರಳದಲ್ಲಿ ಸಿಬಿಐನಿಂದ ಲಿಥುವೇನಿಯಾದ ಪ್ರಜೆ ಅರೆಸ್ಟ್
ಆಂಧ್ರಪ್ರದೇಶ ಮುಖ್ಯಮಂತ್ರಿಗಳು ಸಮಯವಕಾಶ ನೀಡಿದ ತಕ್ಷಣ ನಾನೇ ಖುದ್ದಾಗಿ ಹೋಗಿ ಮಾತನಾಡುತ್ತೇನೆ. ಸಚಿವ ಬೋಸರಾಜು, ಆ ಭಾಗದ ಇತರೆ ಸಚಿವರು ಹಾಗೂ ಶಾಸಕರು ಈ ಕೆಲಸ ಆಗಲೇಬೇಕು ಎಂದು ಬೆನ್ನುಹತ್ತಿದ್ದಾರೆ. ಈಗಾಗಲೇ ನಾನು, ಬೋಸರಾಜು ಹಾಗೂ ಸಚಿವ ಸೋಮಣ್ಣ ಅವರು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಪದ್ದತಿ ಜಾರಿ ಮಾಡ್ತೀವಿ, ಸಮಯ ನಿಗದಿ ಮಾಡಲು ಆಗಲ್ಲ: ಬೋಸರಾಜು
ಈ ಹಿಂದಿನ ಸರ್ಕಾರಗಳು ಸಹ ಹೂಳು ತೆಗೆಯಲು ಕ್ರಮ ತೆಗೆದುಕೊಂಡಿದ್ದವು. ಈ ಬಗ್ಗೆ ನಾವು ಪ್ರಯತ್ನ ಮಾಡಿದ್ದೇವೆ. ಆದರೆ 30 ಟಿಎಂಸಿಯಷ್ಟು ನೀರು ಹಿಡಿಯುವ ಹೂಳನ್ನು ತೆಗೆದು ಎಲ್ಲಿ ಹಾಕುವುದು ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಕಳೆದ ವರ್ಷ ತುಂಗಾಭದ್ರಾ ಅಣೆಕಟ್ಟಿನ ಗೇಟ್ ಕಿತ್ತು ಹೋದಾಗ, ನಾನು ಅಣೆಕಟ್ಟು ಉಳಿಯುವುದಿಲ್ಲ ಎಂದು ಆತಂಕಗೊಂಡಿದ್ದೆ. ನಾನು ಅಲ್ಲಿಗೆ ಭೇಟಿ ನೀಡಿದಾಗ ಇಡೀ ಡ್ಯಾಂ ಅಲ್ಲಾಡುತ್ತಿತ್ತು. ರಾತ್ರೋರಾತ್ರಿ ಅಲ್ಲಿಗೆ ತೆರಳಿ ಗೇಟ್ ದುರಸ್ಥಿಗೊಳಿಸಲು ಕ್ರಮ ತೆಗೆದುಕೊಳ್ಳಲಾಯಿತು. ತಾಂತ್ರಿಕ ತಜ್ಞರಾದ ಕನ್ನಯ್ಯ ನಾಯ್ಡು, ಜೆಎಸ್‌ಡಬ್ಲೂ ಹಾಗೂ ಇತರೇ ಸಂಸ್ಥೆಗಳ ಜತೆ ಮಾತನಾಡಿ ಎಲ್ಲರ ಪರಿಶ್ರಮದಿಂದ ಒಂದು ವಾರಕ್ಕೆ ಗೇಟ್ ದುರಸ್ಥಿ ಮಾಡಿ ನೀರು ನಿಲ್ಲಿಸಲಾಯಿತು ಎಂದು ಹೇಳಿದರು.