ರಾಮನಗರ: ನಾವು ನಮ್ಮ ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧವಿದ್ದೇವೆ. ಈ ದೇಹ ಇರುವುದೇ ನಮ್ಮ ಜನರಿಗಾಗಿ. ಇಲ್ಲಿನ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸ್ವಂತ ಜಮೀನನ್ನ ದಾನ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಕನಕಪುರದ ದೊಡ್ಡಆಲಹಳ್ಳಿಯಲ್ಲಿ ತಮ್ಮನ ಪರ ಪ್ರಚಾರ ನಡೆಸಿದ ಡಿಕೆಶಿ ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿ, ನಮ್ಮ ಜನ ನಮಗೆ ಬಹಳ ಪ್ರೀತಿ ವಿಶ್ವಾಸ ತೋರಿದ್ದಾರೆ. ಅವರ ಆಶೀರ್ವಾದದಿಂದ ಇಡೀ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಇಡೀ ಊರಿಗೆ ಊರೇ ಒಗ್ಗಟ್ಟಿನಿಂದ ಆಶೀರ್ವಾದ ಮಾಡುತ್ತಿದೆ. ಜನರಿಗೆ ನನ್ನ ಮೇಲೆ ನಂಬಿಕೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಂಪತ್ತು ಸಮೀಕ್ಷೆಯ ಮೂಲಕ ಅನ್ಯಾಯದ ಪ್ರಮಾಣವನ್ನು ಕಂಡುಹಿಡಿಯಲು ಬಯಸುತ್ತೇನೆ: ರಾಗಾ
ಕ್ಷೇತ್ರ ಹಿಂದೆ ಹೇಗಿತ್ತು, ಈಗ ಯಾವ ರೀತಿ ಬದಲಾವಣೆ ಮಾಡಿದ್ದೇವೆ ಎಂದು ಜನರಿಗೆ ಗೊತ್ತಿದೆ. ಅನೇಕ ಕಡೆಗಳಲ್ಲಿ ನಮ್ಮ ಆಸ್ತಿಗಳನ್ನು ಮಕ್ಕಳ ವಿದ್ಯಾಭ್ಯಾಸಕ್ಕೆ ನಾವು ಬಿಟ್ಟುಕೊಟ್ಟಿದ್ದೇವೆ. ನಾವು ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿಲ್ಲ ಎಂದು ಜನರಿಗೆ ಗೊತ್ತಿದೆ. ಬಿಜೆಪಿಯವರಾಗಲಿ, ಕುಮಾರಸ್ವಾಮಿ ಅವರಾಗಲಿ ಅವರ ಊರುಗಳಲ್ಲಿ ಇಂತಹ ಕೆಲಸ ಮಾಡಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
ನಾವು ನಮ್ಮ ದೇಹ ಇರುವುದೇ ಜನರಿಗಾಗಿ. ನಾವು ಜನರಿಗಾಗಿ ಪ್ರಾಣ ಕೊಡುವುದಕ್ಕೂ ಸಿದ್ಧವಿದ್ದೇವೆ. ನಮ್ಮ ಜನ ನಮ್ಮನ್ನು ಆಶೀರ್ವಾದ ಮಾಡಿ ಗೆಲ್ಲಿಸುತ್ತಾರೆ. ನನಗಿಂತ ಹೆಚ್ಚಿನ ಲೀಡ್ ಅನ್ನು ಕನಕಪುರದಲ್ಲಿ ಡಿ.ಕೆ.ಸುರೇಶ್ ಪಡೆಯುತ್ತಾರೆ ಎಂದು ಡಿಕೆಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಚುನಾವಣಾ ಪ್ರಚಾರದ ವೇಳೆ ಪ್ರಜ್ಞೆ ತಪ್ಪಿದ ನಿತಿನ್ ಗಡ್ಕರಿ