ತುಮಕೂರು: ಬಿಜೆಪಿ ಮತ್ತು ಜೆಡಿಎಸ್ (BJP-JDS) ಮೈತ್ರಿ ಕನ್ನಡ ನಾಡಿನ ಅಭಿವೃದ್ಧಿಗಾಗಿ, ರೈತರ ಪ್ರಗತಿಗಾಗಿ ಅಲ್ಲ. ನನ್ನನ್ನು ಸೋಲಿಸಿ ದೇವೇಗೌಡರ ಮಗ ಮತ್ತು ಅಳಿಯನ ಗೆಲುವಿಗಾಗಿ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ (D.K.Suresh) ಹೇಳಿದರು.
ಕುಣಿಗಲ್ ಪಟ್ಟಣದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹತ್ತು ವರ್ಷ, ಎಂಟು ತಿಂಗಳು ಮೂರು ಬಾರಿ ಸಂಸದನಾಗಿ ಆಯ್ಕೆಯಾಗಿ ಮತದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೆ. ಚುನಾವಣೆಗಾಗಿ ರಾಜಕಾರಣ ಮಾಡದೇ ಅಭಿವೃದ್ಧಿಗಾಗಿ ಶ್ರಮಿಸಿರುವೆ. ತಾಲ್ಲೂಕಿಗೆ ಹೇಮಾವತಿ ನೀರಿನ ವಿಚಾರದಲ್ಲಿ 25 ವರ್ಷಗಳಿಂದ ಅನ್ಯಾಯವಾಗಿದೆ. 950 ಕೋಟಿ ರೂ. ವೆಚ್ಚದ ಸಂಪರ್ಕ ಕಾಲುವೆ ಯೋಜನೆ ಅನುಷ್ಠಾನದ ಮೂಲಕ ಇದನ್ನು ಸರಿಪಡಿಸಲಾಗಿದೆ ಎಂದರು. ಇದನ್ನೂ ಓದಿ: ನಾಮಪತ್ರ ಸಲ್ಲಿಕೆ ದಿನಾಂಕ ಮುಕ್ತಾಯ – ಹಾಸನದಲ್ಲಿ ಹೆಚ್.ಡಿ ರೇವಣ್ಣ, ಪ್ರಜ್ವಲ್ ರೇವಣ್ಣ ಸೇರಿ 29 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ
Advertisement
Advertisement
ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಟ್ಟ ಹೆಚ್.ಡಿ.ಕುಮಾರಸ್ವಾಮಿ ಅವರ ಬಾವನನ್ನು ಜೆಡಿಎಸ್‌ನಿಂದ ಕಣಕ್ಕಿಳಿಸದೇ, ಬಿಜೆಪಿಯಿಂದ ಕಣಕ್ಕಿಳಿಸಿ ನನ್ನನ್ನು ಸೋಲಿಸಲು ಸಂಚು ರೂಪಿಸಿದ್ದಾರೆ ಎಂದು ಟೀಕಿಸಿದರು.
Advertisement
Advertisement
ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಾದಯಾತ್ರೆ ಮೂಲಕ ಹೋರಾಟ ಮಾಡುತ್ತಿದ್ದಾಗ ಸುಮ್ಮನಿದ್ದ ದೇವೇಗೌಡರು, ಚುನಾವಣೆ ಸಮಯದಲ್ಲಿ ಮಾತ್ರ ಮಾತನಾಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟರು. ಇದನ್ನೂ ಓದಿ: ಬರ ಪರಿಹಾರ ನೀಡಿ ಗಂಡಸ್ತನ ತೋರಿಸಿ: ಸಿಎಂಗೆ ಬೊಮ್ಮಾಯಿ ಸವಾಲ್