ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಆಗುತ್ತಿದೆ. ಆಸ್ಪತ್ರೆಗೆ ಅಡ್ಮಿಟ್ ಮಾಡುವುದು, ಬಿಡುವುದು ನಮ್ಮ ವೈಯಕ್ತಿಕ ವಿಚಾರ ಎಂದು ಸಂಸದ ಡಿ.ಕೆ.ಸುರೇಶ್ ಮಾಧ್ಯಮಗಳ ವಿರುದ್ಧ ಗರಂ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.
ಕನಕಪುರದಿಂದ ಸದಾಶಿವನಗರ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಆಗಮಿಸಿದ್ದ ಬೆನ್ನಲ್ಲೇ ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಸುರೇಶ್, ಇಬ್ಬರು ವೈದ್ಯರು ಮನೆಯಲ್ಲೇ ಇದ್ದು ಡಿ.ಕೆ.ಶಿವಕುಮಾರ್ ಅವರ ಆರೋಗ್ಯ ನೋಡಿಕೊಳ್ಳುತ್ತಿದ್ದಾರೆ. ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಒಂದು ವೇಳೆ ಆರೋಗ್ಯದಲ್ಲಿ ಚೇತರಿಕೆ ಕಾಣದಿದ್ದರೆ ಆಸ್ಪತ್ರೆಗೆ ದಾಖಲಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
Advertisement
Advertisement
ಡಿ.ಕೆ.ಶಿವಕುಮಾರ್ ಹಾಗೂ ನನ್ನ ವಿರುದ್ಧ ಯಾವುದೇ ನೋಟಿಸ್ ಬಂದಿಲ್ಲ, ಯಾವುದೇ ಅಧಿಕಾರಿಗಳು ಮಾಹಿತಿ ನೀಡಿಲ್ಲ. ಆದರೆ ನೋಟಿಸ್ ಬರುತ್ತದೆ ಅಂತಾ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಆಗುತ್ತಿದೆ ಎಂದು ಹೇಳಿದರು.
Advertisement
ಬೆಂಗಳೂರು ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಆಗಮಿಸುತ್ತಿದ್ದಂತೆ ಅವರ ಮನೆಗೆ ಕಿಮ್ಸ್ ಜನರಲ್ ಸರ್ಜನ್ ಡಾ.ಬಿ.ಸಿ.ಭಗವಾನ್ ಅವರು ದೌಡಾಯಿಸದರು. ಕಿಟ್ ಸಹಿತ ಬಂದಿದ್ದ ವೈದ್ಯರು, ಬಳಿಕ ಸಚಿವ ಆರೋಗ್ಯ ತಪಾಸಣೆ ಮಾಡಿದ್ದಾರೆ.
Advertisement
ಡಿಕೆಶಿಗೆ ಫುಡ್ ಪಾಯ್ಸನ್:
ಕಲಬುರಗಿಯಲ್ಲಿ ಪ್ರವಾಸ ಮುಗಿಸಿದ ಬಳಿಕ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಡಿದ್ದು, ಬೆಂಗಳೂರಿಗೆ ಬಂದ ಬಳಿಕ ತೀವ್ರವಾಗಿ ವಾಂತಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕನಕಪುರ ಕಾರ್ಯಕ್ರಮ ರದ್ದುಗೊಳಿಸಿ, ಕಗ್ಗಲೀಪುರ ಪ್ರಾಥಾಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಹೈದರಾಬಾದ್ನಿಂದ ಬೆಂಗಳೂರಿಗೆ ಆಗಮಿಸಿದ ವಿಮಾನದಲ್ಲಿ ಸ್ಯಾಂಡ್ ವಿಚ್ ತಿಂದ ಪರಿಣಾಮ ಸಚಿವರ ಆರೋಗ್ಯದಲ್ಲಿ ಏರುಪೇರಾಗಿದೆ. ನಿತ್ರಾಣಗೊಂಡಿರುವ ಶಿವಕುಮಾರ್ ಅವರಿಗೆ ವೈದ್ಯರು ಗ್ಲುಕೋಸ್ ಹಾಕಿ, ಚಿಕಿತ್ಸೆ ನೀಡುತ್ತಿದ್ದರು. ಆದರೆ ಈಗ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ.
ಬಂಧನ ಭೀತಿ ತಪ್ಪಿಸಿಕೊಳ್ಳಲು ಪ್ಲಾನ್:
ಜಾರಿ ನಿರ್ದೇಶನಾಲಯ ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲು ಸಚಿವ ಡಿ.ಕೆ.ಶಿವಕುಮಾರ್ ಮಾಸ್ಟರ್ ಪ್ಲಾನ್ ನಡೆಸಿದ್ದಾರೆ. ಒಂದು ವೇಳೆ ಇಡಿ ವಿಚಾರಣೆಗೆ ಕರೆದ್ರೆ, ಯಾವ ರೀತಿ ಉತ್ತರ ನೀಡಬೇಕು ಅನ್ನೋದರ ಬಗ್ಗೆ ಹಿರಿಯ ವಕೀಲರಿಂದ ಸಲಹೆ ಪಡೆದುಕೊಳ್ಳುತ್ತಿದ್ದಾರೆ. ಒಂದು ವೇಳೆ ಇಡಿ ಬಂಧಿಸಲು ಮುಂದಾದ್ರೆ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ಇಡಿಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಹಿರಿಯ ವಕೀಲರಿಗೆ ಯಾವಾಗ ಏನು ಬೇಕಾದರೂ ಆಗುವ ಸಾಧ್ಯತೆಗಳಿವೆ. ಕಾನೂನಾತ್ಮಕವಾಗಿ ಎಲ್ಲದಕ್ಕೂ ಸಿದ್ಧರಾಗಿರಿ ಎಂದು ಆಪ್ತ ವಕೀಲರಿಗೆ ಡಿ.ಕೆ.ಶಿವಕುಮಾರ್ ಸಂದೇಶ ರವಾನಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನು ಓದಿ: ಇಡಿಯ ಮುಂದಿನ ಕಾನೂನು ಪ್ರಕ್ರಿಯೆ ಏನು? ಡಿಕೆಶಿ ಆಗ್ತಾರಾ ಅರೆಸ್ಟ್? ಮುಂದಿರುವ ದಾರಿ ಏನು?
ಬುಧವಾರ ಡಿ.ಕೆ.ಶಿವಕುಮಾರ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ಈ ಸಂಬಂಧ ಘಟಾನುಘಟಿ ವಕೀಲರೊಂದಿಗೆ ಸಚಿವರು ನಿರಂತರ ಸಂಪರ್ಕದಲ್ಲಿದ್ದಾರೆ ಎನ್ನಲಾಗುತ್ತಿದೆ. ಇಂದು ಮಧ್ಯಾಹ್ನ ಕನಕಪುರದಲ್ಲಿ ಆಯೋಜಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಚಿವರು ಭಾಗಿಯಾಗಬೇಕಿತ್ತು. ಆದ್ರೆ ಸಚಿವರು ಕಾರ್ಯಕ್ರಮಕ್ಕೆ ಡಿ.ಕೆ.ಸಹೋದರರು ಗೈರಾಗಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv