ರಾಮನಗರ: ಸರ್ಕಾರ ಯಾವುದೇ ಆದೇಶ ನೀಡಲಿ ಪಾದಯಾತ್ರೆ ನಿಲ್ಲಲ್ಲ ಎಂದು ಡಿ.ಕೆ ಸುರೇಶ್ ರಾಜ್ಯ ಸರ್ಕಾರದ ಆದೇಶ ವಿರುದ್ಧವಾಗಿ ಕಿಡಿಕಾರಿದ್ದಾರೆ.
Advertisement
ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ. ಸರ್ಕಾರ ಯಾವುದೇ ಆದೇಶ ನೀಡಲಿ ಪಾದಯಾತ್ರೆ ನಿಲ್ಲಲ್ಲ. ನಾಳೆ ಬೆಳಗ್ಗೆ ಪಾದಯಾತ್ರೆ ಮುಂದುವರಿಯುತ್ತದೆ. ಊಟದ ವ್ಯವಸ್ಥೆ ಇದೆ ದಯವಿಟ್ಟು ಊಟವನ್ನು ಮಾಡಿ ಎಂದು ಮೈಕ್‍ನಲ್ಲಿ ಹೇಳಿದ್ದಾರೆ.
Advertisement
Advertisement
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಲ್ಲಿ ನಿರತರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ರಾಜ್ಯ ಸರ್ಕಾರದ ಆದೇಶದ ಕುರಿತಾಗಿ ಮೌನವಾಗಿದ್ದಾರೆ. ಪಬ್ಲಿಕ್ ಟಿವಿ ವರದಿಗಾರರು ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ಹೇರಿರುವ ಕುರಿತಾಗಿ ಕೇಳಿದಾಗ, ಡಿ.ಕೆ ಶಿವಕುಮಾರ್ ಅವರು ಆದೇಶದ ಕಾಪಿ ತೋರಿಸಿ ಎಂದು ಹೇಳಿದ್ದಾರೆ. ಆರ್ಡರ್ ಕಾಪಿಯನ್ನು ನೋಡಿ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಇದನ್ನೂ ಓದಿ: ಪಾದಯಾತ್ರೆ ತಡೆಯಲು ಯಾರಿಗೆ ಕಾಯುತ್ತಿದ್ದೀರಿ – ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ
Advertisement
ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ರಾಜ್ಯ ಸರ್ಕಾರ ಕಾಂಗ್ರೆಸ್ ನಡೆಸುತ್ತಿದ್ದ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ಹೇರಿದೆ. ಪಾದಯಾತ್ರೆಯನ್ನು ತಕ್ಷಣ ನಿಲ್ಲಿಸುವಂತೆ ಆದೇಶ ಹೊರಡಿಸಲಾಗಿದೆ. ಒಂದು ವೇಳೆ ಸರ್ಕಾರದ ಆದೇಶವನ್ನು ಉಲ್ಲಂಘಿಸಿದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ. ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸಬೇಕು ಎಂದು ರಾಮನಗರ ಎಸ್‌ಪಿ, ಡಿಸಿಗೆ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಸೂಚನೆ ನೀಡಿದ್ದಾರೆ.