ಉಡುಪಿ: ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್‌ನಿಂದ ಡಿ.ಕೆ.ಸುರೇಶ್ (D.K.Suresh) ಅವರಿಗೇ ಟಿಕೆಟ್ ಸಿಗಬೇಕೆಂದು ಬೆಂಬಲಿಗರು ಕೊಲ್ಲೂರು ಮೂಕಾಂಬಿಕೆಯ ಮೊರೆ ಹೋಗಿದ್ದಾರೆ.
ಚನ್ನಪಟ್ಟಣ ಮಾಜಿ ಶಾಸಕ ಎಂ.ಸಿ.ಅಶ್ವಥ್ ಮುಂದಾಳತ್ವದಲ್ಲಿ ಡಿ.ಕೆ.ಸುರೇಶ್ ಬೆಂಬಲಿಗರು ಹಾಗೂ ಅಭಿಮಾನಿಗಳು ಉಡುಪಿಯ (Udupi) ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ (Kollur Mookambika Temple) ತೆರಳಿ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: 50:50 ಅನುಪಾತದಲ್ಲಿ ಹಂಚಿಕೆಯಾಗಿರೊ 1,400 ನಿವೇಶನಗಳನ್ನ ಜಪ್ತಿ ಮಾಡಿ; ಸಿಎಂಗೆ ಬಿಜೆಪಿ ಶಾಸಕ ಆಗ್ರಹ
ದೇವಸ್ಥಾನದಲ್ಲಿ ವಿಶೇಷ ಪೂಜೆ, ಸರ್ವಾಲಂಕಾರ ಸೇವೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಅಶ್ವಥ್, ಡಿಕೆ ಸುರೇಶ್ ಅವರಿಗೆ ಟಿಕೆಟ್ ಸಿಗಬೇಕು ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೆಚ್ಚಿನ ಶಕ್ತಿಗಾಗಿ ಪೂಜೆ ಸಲ್ಲಿಕೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರಿದೆ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರಿಂದ ತೆರವಾಗಿರುವ ಕ್ಷೇತ್ರದಲ್ಲಿ ಇದೇ ನವೆಂಬರ್ 13 ರಂದು ಮತದಾನ ನಡೆಯಲಿದೆ. ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಮೂರು ಪಕ್ಷಗಳಲ್ಲೂ ಪೈಪೋಟಿ ಶುರುವಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ವಿಚಾರವಾಗಿ ಎದ್ದಿರುವ ಗೊಂದಲ ಇನ್ನೂ ಬರೆಹರಿದಿಲ್ಲ. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಸುಳ್ಳು ಆಪಾದನೆ ಮಾಡ್ತಿದ್ದಾರೆ, ನಾವು ಸಿಎಂ ಜೊತೆ ನಿಲ್ಲಬೇಕು: ಕೆಎನ್ ರಾಜಣ್ಣ
ಇತ್ತ ಕಾಂಗ್ರೆಸ್‌ನಲ್ಲಿ ಡಿ.ಕೆ.ಸುರೇಶ್ ಅವರಿಗೆ ಟಿಕೆಟ್ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಅಂತಿಮವಾಗಿ ಯಾರಿಗೆ ಟಿಕೆಟ್ ಸಿಗುತ್ತೆ ಎಂಬುದು ಕುತೂಹಲ ಮೂಡಿಸಿದೆ.