ಡಾ.ರಾಜ್ ಕುಮಾರ್ ಕುಟುಂಬದ ಮತ್ತೊಂದು ಕುಡಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದೆ. ನವಿಲುಗರಿ ನವೀನ್ ಪಿ.ಬಿ ನಿರ್ದೇಶನದ ಈ ಚಿತ್ರಕ್ಕೆ ಷಣ್ಮುಖ ಗೋವಿಂದರಾಜ್ (Shanmukh Govindaraj) ನಾಯಕ. ಈ ಸಿನಿಮಾಗೆ ‘ಚಿನ್ನದ ಮಲ್ಲಿಗೆ ಹೂವೇ’ (Chinnada maallige huve) ಎಂದು ಹೆಸರಿಡಲಾಗಿದೆ.
Advertisement
ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ಅವರ ವಜ್ರಗಳು ಕಾದಂಬರಿ ಆಧಾರಿತ ‘ಸಾರಾ ವಜ್ರ’ ಚಿತ್ರವನ್ನು ನಿರ್ದೇಶಿಸಿದ್ದ ನಿರ್ದೇಶಕಿ ಆರ್‍ನಾ ಸಾಧ್ಯ (Arna Sadya) (ಶ್ವೇತಾ ಶೆಟ್ಟಿ) ಈ ಸಿನಿಮಾದ ಮೂಲಕ ನಿರ್ಮಾಪಕಿಯಾಗಿದ್ದಾರೆ. ಸಂಭ್ರಮ ಮೀಡಿಯಾ ಹೌಸ್ ಎಂಬ ಸಂಸ್ಥೆಯ ಮೂಲಕ ಚಿನ್ನದ ಮಲ್ಲಿಗೆ ಹೂವೇ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ:ವೀರ ಮದಕರಿಯಲ್ಲಿ ಕಿಚ್ಚನ ಮಗಳಾಗಿ ನಟಿಸಿದ್ದ ಹುಡುಗಿ ಈಗ ಹೀರೋಯಿನ್
Advertisement
Advertisement
ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ತಮ್ಮ ಮುದ್ದಾದ ಅಕ್ಷರದ ಮೂಲಕ ಖ್ಯಾತ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಬರೆದುಕೊಟ್ಟರು. ನಟ ರಾಘವೇಂದ್ರ ರಾಜಕುಮಾರ್ ಶೀರ್ಷಿಕೆ ಅನಾವರಣ ಮಾಡಿದರು. ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ನವಿಲುಗರಿ ನವೀನ್ (Navilugari Naveen) ರಚನೆ ಹಾಗೂ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ನಲ್ಲಿ ಆರಂಭವಾಗಲಿದೆ.
Advertisement
ರಾಜಕುಮಾರ್ ಮೊಮ್ಮಗ (ಲಕ್ಷ್ಮೀ ಹಾಗೂ ಗೋವಿಂದರಾಜ್ ಅವರ ಪುತ್ರ) ಷಣ್ಮುಖ ಗೋವಿಂದರಾಜ್ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದು, ನಾಗೇಂದ್ರ ಪ್ರಸಾದ್ ಸಹ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಉಳಿದ ಪಾತ್ರಗಳ ಆಡಿಷನ್ ನಡೆಯುತ್ತಿದೆ. ಪ್ರಣವ್ ಸತೀಶ್ ಚಿನ್ನದ ಮಲ್ಲಿಗೆ ಹೂವೇ ಚಿತ್ರಕ್ಕೆ ಸಂಗೀತ ನೀಡುತ್ತಿದ್ದು, ಮಧು ತುಂಬಕೆರೆ ಅವರ ಸಂಕಲನವಿರಲಿದೆ.
Web Stories