ನವದೆಹಲಿ: ಐಎಎಸ್ ರೋಹಿಣಿ ಸಿಂಧೂರಿ (IAS Rohini Sindhuri) ಸಲ್ಲಿಸಿರುವ ಮಾನನಷ್ಟ ಮೊಕದ್ದಮೆ ರದ್ದು ಕೋರಿ ಸುಪ್ರೀಂಕೋರ್ಟ್‌ಗೆ (Supreme Court) ಮೇಲ್ಮನವಿ ಅರ್ಜಿ ಸಲ್ಲಿಸಿದ್ದ ಐಪಿಎಸ್ ಡಿ.ರೂಪಾ (IPS D Roopa) ಮೌದ್ಗಿಲ್ ತಮ್ಮ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಅರ್ಜಿ ವಾಪಸ್ ಪಡೆಯದಿದ್ದರೆ ವಜಾ ಮಾಡುವುದಾಗಿ ಕೋರ್ಟ್ ಎಚ್ಚರಿಕೆ ನೀಡಿದ ಬಳಿಕ ಅರ್ಜಿ ವಾಪಸ್ ಪಡೆದಿದ್ದಾರೆ.
ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಲು ಹೈಕೋರ್ಟ್ (High Court) ನಿರಾಕರಿಸಿದ ಹಿನ್ನೆಲೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಡಿ.ರೂಪಾ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ನ್ಯಾ. ಎ.ಎಸ್ ಓಕಾ ನೇತೃತ್ವದ ದ್ವಿ ಸದಸ್ಯ ಪೀಠ ವಿಚಾರಣೆ ನಡೆಸಿತು.
Advertisement
ವಿಚಾರಣೆ ವೇಳೆ ಡಿ.ರೂಪಾ ಪರ ವಕೀಲರು ಮಧ್ಯವರ್ತಿಗಳ ಮಧ್ಯಸ್ಥಿಕೆಯಲ್ಲಿ ಪರಸ್ಪರ ಕ್ಷಮೆಯಾಚನೆಗೆ ಮನವಿ ಮಾಡಿದರು. ಇದಕ್ಕೆ ಒಪ್ಪದ ರೋಹಣಿ ಸಿಂಧೂರಿ ಪರ ವಕೀಲರು ಅವರಿಂದ ತಪ್ಪಾಗಿದೆ ಹೀಗಾಗಿ ಡಿ.ರೂಪಾ ಬೇಷರತ್ ಕ್ಷಮೆಯಾಚಿಸಿದರೆ ಮಾನನಷ್ಟ ಕೇಸ್ ಅರ್ಜಿ ವಾಪಸ್ ಪಡೆಯುವುದಾಗಿ ವಾದಿಸಿದರು.ಇದನ್ನೂ ಓದಿ: ನಟಿ ಆಶಿಕಾ ರಂಗನಾಥ್ ನೋಡಲು ಮುಗಿಬಿದ್ದ ಜನ : ಟ್ರಾಫಿಕ್ ಜಾಮ್‌ನಲ್ಲಿ ಸಿಕ್ಕಿಬಿದ್ದ ಅಂಬುಲೆನ್ಸ್
Advertisement
Advertisement
ಈ ವೇಳೆ ಮಧ್ಯಪ್ರವೇಶ ಮಾಡಿದ ನ್ಯಾಯಧೀಶರು ಇಬ್ಬರು ಕೋರ್ಟ್‌ನಲ್ಲಿದ್ದೀರಿ ಪರಸ್ಪರ ಮಾತನಾಡಿಕೊಳ್ಳಬಹುದೇ ಅಥವಾ ಹಿರಿಯ ವಕೀಲರು ಅಥವಾ ನಿವೃತ್ತ ನ್ಯಾಯಾಧೀಶರ ಸಮ್ಮುಖದಲ್ಲಿ ಪರಸ್ಪರ ರಾಜೀ ಸಂಧಾನ ಮಾಡಬಹುದೇ ಎಂದು ಪ್ರಸ್ತಾಪ ಮಾಡಿತು. ಕೆಲ ಕಾಲ ಮಾತುಕತೆಗೂ ಅವಕಾಶ ನೀಡಿ ವಿಚಾರಣೆ ಮುಂದೂಡಿತು.
Advertisement
ಕೆಲ ಹೊತ್ತಿನ ಬಳಿಕ ಡಿ.ರೂಪಾ ಮಾತುಕತೆ ವಿಫಲವಾಯಿತು ಎಂದರು. ಇದಕ್ಕೆ ಕಾರಣ ಏನು ಎಂದು ನ್ಯಾಯಧೀಶರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ರೂಪಾ ನಾನು ಬೇಷರತ್‌ದ ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ ಎಂದು ಹೇಳಿದರು. ಇದಕ್ಕೆ ಉತ್ತರಿಸಿದ ರೋಹಿಣಿ ಸಿಂಧೂರಿ, ಡಿ.ರೂಪಾ ನನ್ನ ಮೇಲೆ ಮಾಡಿದ ಆರೋಪಗಳು ಇನ್ನೂ ಸಾಮಾಜಿಕ ಜಾಲತಾಣದಲ್ಲಿದೆ. ಕೋರ್ಟ್ ಆದೇಶದ ಬಳಿಕವೂ ರೂಪಾ ಡಿಲೀಟ್ ಮಾಡಿಲ್ಲ ಎಂದು ವಾದಿಸಿದರು.
ಇಬ್ಬರು ಹಿರಿಯ ಅಧಿಕಾರಿಗಳು ಹೀಗೆ ವರ್ತಿಸಬಾರದು. ಮಾತುಕತೆಗೆ ಒಪ್ಪದಿದ್ದರೆ ನಾವು ಏನು ಮಾಡಬಹುದು. ಅರ್ಹತೆ ಮೇಲೆ ವಿಚಾರಣೆ ನಡೆಸಬಹುದು ಎಂದು ಕೋರ್ಟ್ ಆಕ್ಷೇಪ ವ್ಯಕ್ತಪಡಿತು. ಅಂತಿಮವಾಗಿ ಇಬ್ಬರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ವಿಚಾರಣಾಧೀನ ನ್ಯಾಯಲಯದಲ್ಲಿ ಪ್ರಕರಣ ಇತ್ಯರ್ಥ ಪಡಿಸಿಕೊಳ್ಳುವಂತೆ ಸೂಚನೆ ನೀಡಿತು. ಸುಪ್ರೀಂಕೋರ್ಟ್ ಸೂಚನೆ ಹಿನ್ನೆಲೆ ಡಿ.ರೂಪಾ ತಮ್ಮ ಅರ್ಜಿ ವಾಪಸ್ ಪಡೆದರು.
ನನ್ನ ವಿರುದ್ಧ ಡಿ.ರೂಪಾ ಮೌದ್ಗಿಲ್ 2023ರ ಫೆ.18 ಮತ್ತು 19ರಂದು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಕೀಳು ಅಭಿರುಚಿಯಿಂದ ಕೂಡಿದ ಆರೋಪ ಮಾಡಿದ್ದಾರೆ. ವಿದ್ಯುನ್ಮಾನ ಮಾಧ್ಯಮಗಳಲ್ಲೂ ಹೇಳಿಕೆ ನೀಡಿದ್ದಾರೆ. ಆ ಆರೋಪಗಳು ನನ್ನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟು ಮಾಡುವಂತಿವೆ. ನನ್ನ ತೇಜೋವಧೆ ಮಾಡುವ ದುರದ್ದೇಶದಿಂದಲೇ ರೂಪ ಈ ಕೃತ್ಯ ಎಸಗಲಾಗಿದೆ. ಇದು ನನ್ನ ಖಾಸಗಿ, ಸಾಮಾಜಿಕ ಮತ್ತು ವೃತ್ತಿ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಮಾನಸಿಕ ಯಾತನೆ ಉಂಟು ಮಾಡಿದೆ ಎಂದು ಆರೋಪಿಸಿ ರೋಹಿಣಿ ಸಿಂಧೂರಿ ಮಾ.3ರಂದು ವಿಚಾರಣಾ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಮಾನಹಾನಿ ಮತ್ತು ಮಾನಸಿಕ ಯಾತನೆ ಉಂಟು ಮಾಡಿರುವುದಕ್ಕಾಗಿ ಡಿ.ರೂಪಾ ಅವರಿಂದ ನನಗೆ 1 ಕೋಟಿ ರೂ. ಮೊತ್ತವನ್ನು ಪರಿಹಾರವಾಗಿ ಕೊಡಿಸಿಬೇಕು. ಅವರ ವಿರುದ್ಧ ಸೂಕ್ತ ದಂಡನೀಯ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದರು. ದೂರು ಪರಿಗಣಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಪ್ರಕರಣ ದಾಖಲಿಸಲು ಮಾ.24ರಂದು ಆದೇಶಿಸಿತ್ತು. ಈ ಆದೇಶ ಮತ್ತು ಖಾಸಗಿ ದೂರನ್ನು ರದ್ದುಪಡಿಸಬೇಕು ಎಂದು ಕೋರಿ ರೂಪಾ 2023ರ ಮೇ.31ರಂದು ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು.ಇದನ್ನೂ ಓದಿ: ಅದ್ಧೂರಿಯಾಗಿ 2ನೇ ಮದುವೆಯಾದ ‘ಜೊತೆ ಜೊತೆಯಲಿ’ ನಟಿ ಮಾನಸ