ಡಾಲಿ ಧನಂಜಯ್- ಸತ್ಯದೇವ್ (Sathyadev) ಕಾಂಬಿನೇಷನ್‌ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಝೀಬ್ರಾ. ಶುರು ಆದಾಗಿನಿಂದಲೂ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆರಂಭವಾಗಿವೆ. ಇದನ್ನೂ ಓದಿ:ಬಿಗ್‌ಬಾಸ್ ಮನೆಯಿಂದ ಇಶಾನಿ ಔಟ್- ಇಂದು ಇನ್ನೊಬ್ಬರಿಗೆ ಕಾದಿದೆ ಶಾಕ್

‘ಝೀಬ್ರಾ’ (Zebra Film) ಸಿನಿಮಾ ತೆಲುಗು ಮತ್ತು ಕನ್ನಡದಲ್ಲಿ ಮೂಡಿ ಬರಲಿದೆ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸಿನಿಮಾ ತೆರೆ ಕಾಣಲಿದೆ. ಈ ಸಿನಿಮಾದಲ್ಲಿ ಪ್ರಿಯಾ ಭವಾನಿ ಶಂಕರ್, ಸತ್ಯರಾಜ್, ಸುನೀಲ್ ವರ್ಮ, ಜೆನಿಫರ್ , ಸುರೇಶ್‌ಚಂದ್ರ ಮೆನನ್, ಕಲ್ಯಾಣಿ ನಟರಾಜ್ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.
ಸಿನಿಮಾವನ್ನು ಈಶ್ವರ್ ಕಾರ್ತಿಕ್ (Eshwae Karthik) ನಿರ್ದೇಶನ ಮಾಡಿದ್ದು, ಕತೆ-ಚಿತ್ರಕತೆ ಅವರದ್ದೇ. ಪ್ಯಾನ್ ಇಂಡಿಯಾ ‘ಝೀಬ್ರಾ’ ಚಿತ್ರಕ್ಕೆ ಕೆಜಿಎಫ್ (KGF) ಚಿತ್ರ ಖ್ಯಾತಿಯ ರವಿ ಬಸ್ರೂರು ಸಂಗೀತ ಕೊಟ್ಟಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರ ಆದಷ್ಟು ಬೇಗ ನಿಮ್ಮ ಮುಂದೆ ಬರಲಿದೆ.

