ಸ್ಯಾಂಡಲ್‌ವುಡ್ ನಟ ಡಾಲಿ (Daali) ಫೆ.16ರಂದು ದಾಂಪತ್ಯ ಜೀವನಕ್ಕೆ (Wedding) ಕಾಲಿಡಲು ಸಜ್ಜಾಗಿದ್ದಾರೆ. ಈ ಹಿನ್ನೆಲೆ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರನ್ನು ಭೇಟಿಯಾಗಿ ಮದುವೆ ಪತ್ರಿಕೆಯನ್ನು ನೀಡಿದ್ದಾರೆ.
Advertisement
ಇಂದು (ಜ.9) ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಡಾಲಿ (Daali) ಮದುವೆ ಪತ್ರಿಕೆ ನೀಡಿದ್ದಾರೆ. ಇದನ್ನೂ ಓದಿ:BBK 11: ಗೆಲುವಿಗಾಗಿ ವರಸೆ ಬದಲಿಸಿದ ಭವ್ಯಾಗೆ ಕಿವಿಹಿಂಡಿದ ತ್ರಿವಿಕ್ರಮ್
Advertisement
Advertisement
ಅಂದಹಾಗೆ, ಡಾಲಿ ಧನಂಜಯ ಸಿನಿಮಾ ಕೆಲಸಕ್ಕೆ ಬ್ರೇಕ್ ನೀಡಿ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಮಾಜಿ ಪಿಎಂ ದೇವೇಗೌಡ, ಡಿ.ಕೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕರಿಗೆ ಮದುವೆಗೆ ಆಹ್ವಾನಿಸಿದ್ದಾರೆ.
Advertisement
ಇನ್ನೂ ಡಾಕ್ಟರ್ ಧನ್ಯತಾ ಜೊತೆ ಡಾಲಿ ಮೈಸೂರಿನಲ್ಲಿ ಹಸೆಮಣೆ ಏರಲಿದ್ದಾರೆ. ಫೆ.16ರಂದು ನಡೆಯಲಿರುವ ಈ ಮದುವೆಗೆ ರಾಜಕೀಯ ಗಣ್ಯರು, ಸಿನಿಮಾ ತಾರೆಯರು ಭಾಗಿಯಾಲಿದ್ದಾರೆ.
ಇನ್ನೂ ಅಣ್ಣ ಫ್ರಮ್ ಮೆಕ್ಸಿಕೋ, ನಾಡಪ್ರಭು ಕೆಂಪೇಗೌಡ ಸೇರಿದಂತೆ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಹೊಸಬರ ಸಿನಿಮಾಗಳಿಗೆ ತಮ್ಮ ನಿರ್ಮಾಣ ಸಂಸ್ಥೆಯಿಂದ ನಿರ್ಮಾಣ ಕೂಡ ಮಾಡುತ್ತಿದ್ದಾರೆ.