ಬ್ಯಾಚುಲರ್ ಆಗಿದ್ದ ನಟ ಡಾಲಿ ಧನಂಜಯ (Daali Dhananjay) ಅವರು ಇದೇ ಫೆ.16ರಂದು ಮದುವೆಗೆ ಸಜ್ಜಾಗಿದ್ದಾರೆ. ಈ ಹಿನ್ನೆಲೆ ಹೈದರಾಬಾದ್‌ಗೆ ತೆರಳಿ ‘ಪುಷ್ಪ 2’ (Pushpa 2) ತಂಡವನ್ನು ಭೇಟಿಯಾಗಿ ಮದುವೆ ಆಮಂತ್ರಣ ಪತ್ರಿಕೆಯನ್ನು ಡಾಲಿ ನೀಡಿದ್ದಾರೆ. ಇದನ್ನೂ ಓದಿ:ಆರೋಗ್ಯ ಸಮಸ್ಯೆ ಇದೆ, ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ: ಸೆಲೆಬ್ರಿಟಿಗಳಿಗೆ ದರ್ಶನ್ ಮನವಿ
‘ಪುಷ್ಪ’, ‘ಪುಷ್ಪ 2’ ಸಿನಿಮಾದಲ್ಲಿ ಡಾಲಿ ನಟಿಸಿ ಸೈ ಎನಿಸಿಕೊಂಡಿರೋದ್ರಿಂದ ತಂಡದ ಜೊತೆ ಉತ್ತಮ ಒಡನಾಟ ಇದೆ. ಹಾಗಾಗಿ ಹೈದರಾಬಾದ್‌ಗೆ ಆಗಮಿಸಿ ಅಲ್ಲು ಅರ್ಜುನ್(Allu Arjun), ಡೈರೆಕ್ಟರ್ ಸುಕುಮಾರ್ (Sukumar) ಹಾಗೂ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣಗೆ (Rashmika Mandanna) ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಭೇಟಿಯಾಗಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
ಇನ್ನೂ ಇದೇ ಫೆ.15 ಹಾಗೂ ಫೆ.16ರಂದು ಡಾಕ್ಟರ್ ಧನ್ಯತಾ ಜೊತೆ ಡಾಲಿ ಹಸೆಮಣೆ ಏರಲಿದ್ದಾರೆ. ಮೈಸೂರಿನಲ್ಲಿ ಅದ್ಧೂರಿಯಾಗಿ ನಡೆಯಲಿರುವ ಈ ಮದುವೆಗೆ ರಾಜಕೀಯ ಗಣ್ಯರಿಗೆ ಹಾಗೂ ಸ್ಯಾಂಡಲ್‌ವುಡ್ ಸೆಲೆಬ್ರಿಟಿಗಳು ಬರಲಿದ್ದಾರೆ.