ತಮಿಳು ನಟ ಸೂರ್ಯ ಜೊತೆಗಿನ ಸಿನಿಮಾಗೆ ಡಾಲಿ ನೋ ಎಂದಿದ್ದೇಕೆ?

Public TV
1 Min Read
Dolly Dhananjay 1

ನ್ನಡದ ನಟರಾಕ್ಷಸ ಡಾಲಿ ಧನಂಜಯ (Daali Dhananjay) ಸದ್ಯ ನಟ, ನಿರ್ಮಾಪಕನಾಗಿ ಸೈ ಎನಿಸಿಕೊಂಡಿದ್ದಾರೆ. ಕನ್ನಡ ಮಾತ್ರವಲ್ಲ ಪರಭಾಷೆಯ ಸಿನಿಮಾಗಳಲ್ಲಿ ಕೂಡ ಕಾಣಿಸಿಕೊಳ್ತಿದ್ದಾರೆ. ಸಂದರ್ಶನವೊಂದರಲ್ಲಿ ತಮಿಳು ನಟ ಸೂರ್ಯ (Suriya) ಸಿನಿಮಾಗೆ ಆಫರ್ ಬಂದಿದ್ದರ ಬಗ್ಗೆ ಮಾತನಾಡಿದ್ದಾರೆ. ಈ ಚಿತ್ರವನ್ನು ಕೈಬಿಟ್ಟಿದ್ದೇಕೆ ಎಂದು ಡಾಲಿ ಅಸಲಿ ವಿಚಾರ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ:ಅಜಿತ್‌ಗೆ ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್- ‘ಕೆಜಿಎಫ್ 3’ಗೆ ಕನೆಕ್ಟ್ ಆಗಲಿದೆ ಈ ಚಿತ್ರ

Daali Dhananjaya

ಡೈರೆಕ್ಟರ್ ಕಾರ್ತಿಕ್ ಸುಬ್ಬರಾಜು ಅವರು ಸೂರ್ಯ 44ನೇ (Suriya 44) ಸಿನಿಮಾದಲ್ಲಿ ನಟಿಸೋಕೆ ಹೇಳಿದರು. ಆದರೆ, ಡೇಟ್ಸ್ ಮ್ಯಾನೇಜ್ ಮಾಡೋಕೆ ಆಗಿಲ್ಲ. ನನಗೆ ಆ ಸಿನಿಮಾ ಮಾಡಬೇಕಿತ್ತು. ಸೂರ್ಯ ಹಾಗೂ ಕಾರ್ತಿಕ್ ಸುಬ್ಬರಾಜು ಜೊತೆ ಕೆಲಸ ಮಾಡಬೇಕು ಎನ್ನುವ ಹಂಬಲ ಇತ್ತು. ಡೇಟ್ಸ್ ಹೊಂದಾಣಿಕೆ ಆಗದೇ ಮಾಡಲು ಆಗಿಲ್ಲ ಎಂದು ಡಾಲಿ ಧನಂಜಯ ಹೇಳಿದ್ದಾರೆ. ನನಗೆ ದೊಡ್ಡ ಸ್ಟಾರ್‌ಗಳ ಜೊತೆ ಒಳ್ಳೆಯ ನಿರ್ದೇಶಕರ ಜೊತೆ ಕೆಲಸ ಮಾಡುವ ಆಸಕ್ತಿಯಿದೆ ಎಂದಿದ್ದಾರೆ.

ಅಂದಹಾಗೆ, ಸೂರ್ಯ ಮತ್ತು ಸುಬ್ಬರಾಜು ಕಾಂಬಿನೇಷನ್ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಗ್ಯಾಂಗ್‌ಸ್ಟರ್ ಅವತಾರದಲ್ಲಿ ಸೂರ್ಯ ಕಾಣಿಸಿಕೊಂಡಿದ್ದಾರೆ. ಸಿನಿಮಾದ ಮೊದಲ ಝಲಕ್‌ಗೆ ಫ್ಯಾನ್ಸ್ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಸೂರ್ಯಗೆ ನಾಯಕಿಯಾಗಿ ಪೂಜಾ ಹೆಗ್ಡೆ ನಟಿಸಿದ್ದಾರೆ.

Share This Article