ನಟ ಡಾಲಿ ಧನಂಜಯ (Daali dhananjay) ಮತ್ತು ಧನ್ಯತಾ (Dhanyatha) ದಂಪತಿ ಹಾಸನ ಜಿಲ್ಲೆಯ ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪೂಜೆ ಸಲ್ಲಿಸುವ ಮೂಲಕ ನಿನ್ನೆ (ಮಾ.30) ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ. ಇದನ್ನೂ ಓದಿ:L2: Empuraan ವಿವಾದ- ನನ್ನ ಮಗನನ್ನ ಬಲಿಪಶುವನ್ನಾಗಿ ಮಾಡಲಾಗಿದೆ: ಪೃಥ್ವಿರಾಜ್ ಸುಕುಮಾರನ್ ತಾಯಿ
ಯುಗಾದಿ ಹಬ್ಬದ ಹಿನ್ನೆಲೆ ಪತ್ನಿಯೊಂದಿಗೆ ನಟ ಧನಂಜಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಳೇಬೀಡಿನಲ್ಲಿರುವ ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಬಳಿಕ ನೆಲದ ಮೇಲೆ ಕುಳಿತು ದಂಪತಿ ಪ್ರಸಾದ ಸ್ವೀಕರಿಸಿ ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ಈ ವೇಳೆ ದಂಪತಿಗೆ ದೇವಾಲಯದ ಆಡಳಿತ ಮಂಡಳಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಇದನ್ನೂ ಓದಿ:ವಿಜಯ್ ಸೇತುಪತಿಗೆ ‘ಅಪ್ಪು’ ಚಿತ್ರದ ನಿರ್ದೇಶಕ ಆ್ಯಕ್ಷನ್ ಕಟ್- ಜೂನ್‌ನಿಂದ ಶೂಟಿಂಗ್ ಶುರು
ಡಾ. ಧನ್ಯತಾ ಜೊತೆ ಈ ವರ್ಷ ಫೆ.16ರಂದು ಡಾಲಿ ಮೈಸೂರಿನಲ್ಲಿ ಮದುವೆಯಾದರು. ಮದುವೆ ಮತ್ತು ಆರತಕ್ಷತೆಗೆ ಸಿನಿಮಾ ರಂಗ ಮತ್ತು ರಾಜಕೀಯದ ಗಣ್ಯರು ಭಾಗಿಯಾಗಿ ಶುಭಹಾರೈಸಿದ್ದರು.
ಇನ್ನೂ ಅಣ್ಣ ಫ್ರಮ್ ಮೆಕ್ಸಿಕೋ, ನಾಡಪ್ರಭು ಕೆಂಪೇಗೌಡ ಸೇರಿದಂತೆ ತೆಲುಗಿನಲ್ಲೂ ಡಾಲಿಗೆ ಹಲವು ಸಿನಿಮಾಗಳಿವೆ. ಹೊಸ ಪ್ರತಿಭೆಗಳಿಗೆ ತಮ್ಮದೇ ನಿರ್ಮಾಣ ಚಿತ್ರದಲ್ಲಿ ಅವಕಾಶವನ್ನು ಕೊಡುತ್ತಿದ್ದಾರೆ. ನಿರ್ಮಾಪಕನಾಗಿರೂ ಡಾಲಿ ತೊಡಗಿಸಿಕೊಂಡಿದ್ದಾರೆ.