ನವದೆಹಲಿ: 2022ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ಈ ಬಾರಿ ಇಬ್ಬರು ಕನ್ನಡಿಗರಿಗೆ ಪ್ರಶಸ್ತಿ ದೊರೆತಿದೆ.
ಕೇಂದ್ರ ಸಾಹಿತ್ಯ ಅಕಾಡೆಮಿ 2022ರ ಯುವ ಸಾಹಿತ್ಯ ಪ್ರಶಸ್ತಿಗೆ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ದಾದಾಪೀರ್ ಜೈಮನ್ ಅವರು ಭಾಜನರಾಗಿದ್ದಾರೆ. ಶಿರಸಿ ಸಿದ್ದಾಪುರದ ತಮ್ಮಣ್ಣ ಬೀಗಾರ ಅವರು ಬಾಲ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
Advertisement
ದಾದಾಪೀರ್ ಅವರ ‘ನೀಲಕುರಿಂಜಿ’ ಕಥಾ ಸಂಕಲನಕ್ಕೆ ಯುವ ಸಾಹಿತ್ಯ ಪ್ರಶಸ್ತಿ ಬಂದಿದ್ದರೆ, ತಮ್ಮಣ್ಣ ಬೀಗಾರ ಅವರ ‘ಬಾವಲಿ ಗುಹೆ’ ಮಕ್ಕಳ ಕಾದಂಬರಿಗೆ ಬಾಲ ಸಾಹಿತ್ಯ ಪ್ರಶಸ್ತಿ ಸಂದಿದೆ. ‘ನೀಲಕುರಿಂಜಿ’ಯನ್ನು ರಾಯಚೂರು ಜಿಲೆಯ ಕೆ. ಗುಡುದಿನ್ನಿಯ ವೈಷ್ಣವಿ ಪ್ರಕಾಶನವು ಪ್ರಕಟಿಸಿದೆ. ‘ಬಾವಲಿ ಗುಹೆ’ಯನ್ನು ಬೆಂಗಳೂರಿನ ಅಭಿನವ ಪ್ರಕಾಶನ ಪ್ರಕಟಿಸಿದೆ. ಇದನ್ನೂ ಓದಿ: ಆಜಾನ್ ವೇಳೆ ಧ್ವನಿವರ್ಧಕ ಬಳಕೆ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ
Advertisement
Advertisement
ಯುವ ಸಾಹಿತ್ಯ ಪ್ರಶಸ್ತಿಯ ಜ್ಯೂರಿಗಳಾಗಿ ಸ. ಉಷಾ, ನಗರಗೆರೆ ರಮೇಶ್ ಹಾಗೂ ಎನ್.ಎಸ್ ಗುಂಡೂರ ಕೆಲಸ ನಿರ್ವಹಿಸಿದ್ದರೆ, ಬಾಲ ಸಾಹಿತ್ಯ ಪ್ರಶಸ್ತಿಗೆ ಶಿವಲಿಂಗಪ್ಪ ಹಂದಿಹಾಳು, ಲೋಹಿತ್ ನಾಯ್ಕರ್ ಹಾಗೂ ಎಂ.ಹೆಚ್ ನಾಗರಾಜ್ ಅವರು ಜ್ಯೂರಿಗಳಾಗಿದ್ದರು. ಪುಸ್ತಕ ಆಯ್ಕೆ ಪ್ರಕ್ರಿಯೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿಯ ಸಂಯೋಜಕರಾದ ಡಾ. ಸರಜೂ ಕಾಟ್ಕರ್ ಅವರ ಉಸ್ತುವಾರಿಯಲ್ಲಿ ನಡೆಯಿತು. ಇದನ್ನೂ ಓದಿ: ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಸಿ.ಟಿ ರವಿ ದಂಪತಿ
Advertisement
ಪ್ರಶಸ್ತಿ ವಿಜೇತರನ್ನು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಡಾ. ಚಂದ್ರಶೇಖರ ಕಂಬಾರ ಅವರು ಅಭಿನಂದಿಸಿದ್ದಾರೆ. ಪ್ರಶಸ್ತಿಗಳನ್ನು ಡಿಸೆಂಬರ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಈ ಪ್ರಶಸ್ತಿ 50,000 ರೂ. ಹಾಗೂ ಸನ್ಮಾನವನ್ನು ಒಳಗೊಂಡಿರುತ್ತದೆ.