ಮುಂಬೈ: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ (Mithun Chakraborty) ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು (Dadasaheb Phalke Award) ಘೋಷಣೆ ಮಾಡಿದ್ದು, ಅ.08 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಯನ್ನು (70th National Film Awards) ಸ್ವೀಕರಿಸಲಿದ್ದಾರೆ.
ಈ ಕುರಿತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮಿಥುನ್ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಭಾರತೀಯ ಚಿತ್ರರಂಗಕ್ಕೆ ಅವರ ಅಪ್ರತಿಮ ಕೊಡುಗೆಗಾಗಿ ಪೌರಾಣಿಕ ನಟರಾದ ಶಾ.ಮಿಥುನ್ ಚಕ್ರವರ್ತಿಯವರನ್ನು ದಾದಾಸಾಹೇಬ್ ಫಾಲ್ಕೆ ತೀರ್ಪುಗಾರರ ಸಮಿತಿಯು ಆಯ್ಕೆ ಮಾಡಿದೆ. ಅ.8 ರಂದು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಬರೆದುಕೊಂಡಿದ್ದು, ಪೋಸ್ಟ್ ಹಂಚಿಕೊಂಡಿದ್ದಾರೆ.ಇದನ್ನೂ ಓದಿ: ಬಾಹ್ಯಾಕಾಶ ನಿಲ್ದಾಣ ತಲುಪಿತು ಕ್ರ್ಯೂ-9 ಮಿಷನ್ – ಅಪ್ಪಿಕೊಂಡು ಸ್ವಾಗತಿಸಿದ ಗಗನಯಾನಿಗಳು
Advertisement
Advertisement
Delighted that Shri Mithun Chakraborty Ji has been conferred the prestigious Dadasaheb Phalke Award, recognizing his unparalleled contributions to Indian cinema. He is a cultural icon, admired across generations for his versatile performances. Congratulations and best wishes to… https://t.co/aFpL2qMKlo
— Narendra Modi (@narendramodi) September 30, 2024
Advertisement
ದಾದಾಸಾಹೇಬ್ ಫಾಲ್ಕೆ ಆಯ್ಕೆ ಸಮಿತಿಯು ಭಾರತೀಯ ಚಿತ್ರರಂಗಕ್ಕೆ ಅಪ್ರತಿಮ ಕೊಡುಗೆಗಾಗಿ ಖ್ಯಾತ ನಟ, ಶಾ. ಮಿಥುನ್ ಚಕ್ರವರ್ತಿ ಅವರಿಗೆ ಪ್ರಶಸ್ತಿ ನೀಡಲು ನಿರ್ಧರಿಸಿದೆ ಎಂದು ಘೋಷಿಸಲು ಸಂತೋಷವಾಗುತ್ತದೆ ಎಂದಿದ್ದಾರೆ. ಜೊತೆಗೆ ಈ ವರ್ಷದ ಆರಂಭದಲ್ಲಿ ಮಿಥುನ್ ಚಕ್ರವರ್ತಿ ಅವರಿಗೆ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣವನ್ನು ಘೋಷಿಸಲಾಗಿತ್ತು.
Advertisement
Mithun Da’s remarkable cinematic journey inspires generations!
Honoured to announce that the Dadasaheb Phalke Selection Jury has decided to award legendary actor, Sh. Mithun Chakraborty Ji for his iconic contribution to Indian Cinema.
🗓️To be presented at the 70th National…
— Ashwini Vaishnaw (@AshwiniVaishnaw) September 30, 2024
ಮಿಥುನ್ ಚಕ್ರವರ್ತಿ ಹಿನ್ನೆಲೆ:
ಕಲ್ಕತ್ತಾದಲ್ಲಿ ಜನಿಸಿದ ಇವರು, 1976ರ ಮೃಗಯಾ (Mrigayaa) ಸಿನಿಮಾದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ಈ ಸಿನಿಮಾದ ಅತ್ಯುತ್ತಮ ನಟನೆಯಿಂದಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ತಂದುಕೊಟ್ಟಿತು. ಬಳಿಕ 1992 ರಲ್ಲಿ ತೆರೆ ಕಂಡ ತಹದರ್ ಕಥಾ ಹಾಗೂ 1998ರಲ್ಲಿ ತೆರೆ ಕಂಡಿದ್ದ ಸ್ವಾಮಿ ವಿವೇಕಾನಂದ ಸಿನಿಮಾದ ಪಾತ್ರಗಳಿಗಾಗಿ ಎರಡು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ ಇತ್ತೀಚಿಗೆ ತೆರೆ ಕಂಡಿದ್ದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್‌ನಲ್ಲಿ (The Kashmiri Files) ಕಾಣಿಸಿಕೊಂಡಿದ್ದರು.ಇದನ್ನೂ ಓದಿ: ಮುಡಾದಲ್ಲಿ ಸಿಎಂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಸಿದ್ದರಾಮಯ್ಯರ ರಾಜೀನಾಮೆ ಅನಿವಾರ್ಯ: ವಿಜಯೇಂದ್ರ