ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂಪ್ಪ ಕೇಂದ್ರ ನಾಯಕರಿಗೆ ಕಪ್ಪ ನೀಡಿದ್ದಾರೆ ಎನ್ನಲಾದ ಡೈರಿಯೊಂದರ ಕೆಲ ಪುಟಗಳನ್ನು ಕಾಂಗ್ರೆಸ್ ಶುಕ್ರವಾರ ಬಿಡುಗಡೆ ಮಾಡಿತ್ತು. ಇದೀಗ ಕಾಂಗ್ರೆಸ್ ಬಿಡುಗಡೆ ಮಾಡಿರುವ ಡೈರಿಯ ಸತ್ಯಾಂಶವನ್ನು ಐಟಿ ಇಲಾಖೆ ಅಲ್ಲಗಳೆಯುವ ಮೂಲಕ ಯಡಿಯೂರಪ್ಪರಿಗೆ ಕ್ಲೀನ್ ಚಿಟ್ ನೀಡಿದೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ವರ್ಷಾಂತ್ಯದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಜಿ ಬಿ.ಆರ್. ಬಾಲಕೃಷ್ಣನ್, ಕಾಂಗ್ರೆಸ್ ಬಿಡುಗಡೆ ಮಾಡಿರುವ ದಾಖಲೆಗಳೆಲ್ಲ ನಕಲಿ. ಒಂದು ಐಟಿ ದಾಳಿಯಲ್ಲಿ ನಮ್ಮ ಸಿಬ್ಬಂದಿಗೆ ಕೆಲ ದಾಖಲೆಗಳು ಸಿಕ್ಕಾಗ, ಅವನ್ನೆಲ್ಲ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಆ ದಾಖಲೆಗಳೆಲ್ಲ ಫೋಟೋ ಕಾಪಿಗಳು ಆಗಿದ್ದರಿಂದ ಹೈದರಾಬಾದ್ ಸಿಎಸ್‍ಎಫ್‍ಎಲ್ ಸತ್ಯಾಂಶ ಕಂಡು ಹಿಡಿಯಲಿಲ್ಲ. ನಮ್ಮ ಅಭಿಪ್ರಾಯದ ಪ್ರಕಾರ ಅದೊಂದು ಸುಳ್ಳು ದಾಖಲೆ ಎಂದು ಸ್ಪಷ್ಟಪಡಿಸಿದರು.
Advertisement
Advertisement
ಶುಕ್ರವಾರ ಬಿಡುಗಡೆ ಮಾಡಿರುವ ದಾಖಲೆಗಳ ಮೊದಲ ಪುಟ ನಮಗೆ ಸಿಕ್ಕಿರಲಿಲ್ಲ. ಹಾಗಾಗಿ ಹಣ ವರ್ಗಾವಣೆಯ ಬಗ್ಗೆ ಬರೆದಿರುವ ಆ ಪುಟಗಳು ಶುದ್ಧ ಸುಳ್ಳು ಎಂದು ಬಾಲಕೃಷ್ಣನ್ ಖಚಿತಪಡಿಸಿದರು.
Advertisement
ಸಚಿವ ಡಿ.ಕೆ.ಶಿವಕುಮಾರ್ ಅವರ ಮೇಲೆ ದಾಳಿ ನಡೆಸಿದಾಗ ಕೆಲ ದಾಖಲಾತಿಗಳು ಲಭ್ಯವಾಗಿದ್ದವು. ಆ ದಾಖಲೆಗಳನ್ನ ತೋರಿಸಿ ಡಿ.ಕೆ.ಶಿವಕುಮಾರ್ ತನಿಖೆಯಿಂದ ರಿಯಾಯಿತಿ ಪಡೆದುಕೊಳ್ಳಲು ಮುಂದಾಗಿದ್ದರು. ನಾವು ಯಾವುದೇ ಒಂದು ಪಕ್ಷದ ಪರವಾಗಿ ಕೆಲಸ ಮಾಡದ ಹಿನ್ನೆಲೆಯಲ್ಲಿ ನಮ್ಮ ಸಿಬ್ಬಂದಿ ಸಹಾಯ ಮಾಡಲಿಲ್ಲ. ಈ ವೇಳೆ ಲಭ್ಯವಾಗಿರುವ ಕೆಲ ದಾಖಲೆಗಳ ಲಾಭ ಪಡೆಯಲು ಸಚಿವರು ಮುಂದಾಗಿದ್ದರು. ಕಾನೂನು ಪ್ರಕಾರವಾಗಿ ಯಾವ ಕ್ರಮಕೈಗೊಳ್ಳಬೇಕು ಆ ಕ್ರಮಗಳನ್ನು ಇಲಾಖೆ ತೆಗೆದುಕೊಂಡಿದೆ ಎಂದು ಬಾಲಕೃಷ್ಣನ್ ತಿಳಿಸಿದರು.