– ಪೊಲೀಸರಿಗೆ ಕಾಮುಕರ ಹೆಸರು ತಿಳಿಸಿದ ಬಾಲಕಿ
ಮಂಗಳೂರು: ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗ್ಯಾಂಗ್ ರೇಪ್ ಪ್ರಕರಣ ನಡೆದಿರುವುದು ಇಂದು ಬೆಳಕಿಗೆ ಬಂದಿದೆ.
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಅಪ್ರಾಪ್ತೆಯ ಮೇಲೆ ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪವೊಂದು ಕೇಳಿಬಂದಿದೆ. ಈ ಬಗ್ಗೆ ಸ್ವತಃ ಬಾಲಕಿಯೇ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ. ಅಲ್ಲದೆ ಐವರು ಕಾಮುಕರ ಹೆಸರನ್ನು ಕೂಡ ತಿಳಿಸಿದ್ದಾಳೆ.
ಕಾಮುಕರು ಬಂಟ್ವಾಳದಿಂದ ಬಾಲಕಿಯನ್ನು ಅಪಹರಿಸಿ ರೂಂ ಒಂದಕ್ಕೆ ಕರೆದೊಯ್ದಿದ್ದಾರೆ. ನಂತರ ಅಲ್ಲಿ ಬಾಲಕಿಗೆ ಮತ್ತು ಬರಿಸುವ ಜ್ಯೂಸ್ ನೀಡಿ ಅತ್ಯಾಚಾರ ಮಾಡಿದ್ದಾರೆ. ಸದ್ಯ ಬಾಲಕಿಯನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ರಸ್ತೆ ಗುಂಡಿ ಆಯ್ತು, ಈಗ ಪಾರ್ಕ್ ಹೊಂಡಕ್ಕೆ ಬಾಲಕ ಬಲಿ..!
ಬಾಲಕಿಯ ವೈದ್ಯಕೀಯ ಪರೀಕ್ಷೆಯ ವರದಿ ಬಂದ ಬಳಿಕ ಕೃತ್ಯದ ಬಗ್ಗೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸಲಿದ್ದಾರೆ. ಪ್ರಕರಣದ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದು, ಕಾಮುಕರ ಪತ್ತೆಗೆ 2 ತಂಡಗಳನ್ನು ರಚಿಸಲಾಗಿದೆ.