ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಬಿಜೆಪಿ (BJP) ಸಾಮಾಜಿಕ ಜಾಲತಾಣದ ಮುಖ್ಯಸ್ಥ ಜಯಾನಂದ ಅವರ ಮನೆಗೆ ಕೆಲವರು ಚೆಂಡೆ ವಾಲಗದ ಮೂಲಕ ಕಾಂಗ್ರೆಸ್‍ನ (Congress) ಅನುದಾನದ ಬ್ಯಾನರ್ ಹಿಡಿದು ಬಂದು ದಾಂಧಲೆ ಮಾಡಿದ ಘಟನೆ ನಡೆದಿದೆ.
ಜಿಲ್ಲೆಯ ಪುತ್ತೂರು ತಾಲೂಕಿನ ತಾರಿಗುಡ್ಡೆಯ ಜಯಾನಂದ ಅವರ ಮನೆಗೆ ರೌಡಿಶೀಟರ್ ಪ್ರಜ್ವಲ್ ರೈ ಮತ್ತು ಕಾಂಗ್ರೆಸ್ ಬೆಂಬಲಿಗರು ನುಗ್ಗಿ ದಾಂಧಲೆ ಮಾಡಿದ್ದಾರೆ. ಈ ವೇಳೆ ಅನುದಾನ ಹಂಚಿಕೆ ವಿಚಾರದಲ್ಲಿ ತಕರಾರು ತೆಗೆದಿದ್ದಾರೆ. ಅಲ್ಲದೇ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಕೊನೆಗೂ ಕನಸು ನನಸು – ಬೆಂಗಳೂರಿನಲ್ಲಿ ರಾತ್ರಿ ಆರ್‌ಸಿಬಿ ಅಭಿಮಾನಿಗಳ ಸಂಭ್ರಮಾಚರಣೆ
- Advertisement3
ಪುತ್ತೂರು ಶಾಸಕರು ಅತೀ ಹೆಚ್ಚು ಅನುದಾನ ತಂದಿದ್ದಾರೆ ಎಂಬ ವಿಚಾರಕ್ಕೆ, ಸ್ಪಷ್ಟನೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಪೋಸ್ಟ್ ಹಾಕಿದ್ದರು. ಇದೇ ವಿಚಾರಕ್ಕೆ ಈ ಗಲಾಟೆ ನಡೆದಿದೆ ಎನ್ನಲಾಗಿದೆ. ರೌಡಿಶೀಟರ್ ಪ್ರಜ್ವಲ್ ರೈ ಮತ್ತು ತಂಡದಿಂದ ದಾಂಧಲೆ ನಡೆದಿದ್ದು, ಇವರು ಶಾಸಕ ಅಶೋಕ್ ರೈ ಬೆಂಬಲಿಗರು ಎನ್ನಲಾಗಿದೆ.
- Advertisement
ಈ ಸಂಬಂಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹೋಟೆಲ್ ಒಳಗೆ ಕುಳಿತಿದ್ದವನ ಮೇಲೆ ಗುಂಡು ಹಾರಿಸಿ, ಮಚ್ಚಿನಿಂದ ಕೊಚ್ಚಿದ್ರು!