ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪ್ರಕರಣ ಪತ್ತೆಯಾಗಿದ್ದು, 67 ವರ್ಷದ ವೃದ್ಧೆಯಲ್ಲಿ ಕೊರೊನಾ ಸೋಂಕು ಕಂಡುಬಂದಿದೆ.
ಬಂಟ್ವಾಳ ಭಾಗದ ವೃದ್ಧೆಯಲ್ಲಿ ಸೋಂಕು ಪತ್ತೆಯಾಗಿದೆ. ಭಾನುವಾರ ಮೃತಪಟ್ಟ ಮಹಿಳೆಯ ಸಂಪರ್ಕದಿಂದ ಸೋಂಕು ಹರಡಿರುವ ಸಾಧ್ಯತೆ ಇದೆ.
Advertisement
Advertisement
ಬಂಟ್ವಾಳದ 42 ವರ್ಷದ ಮಹಿಳೆ ಭಾನುವಾರ ಮೃತಪಟ್ಟಿದ್ದರು. ಈ ಮಹಿಳೆ ಸಂಪರ್ಕದಿಂದ ವೃದ್ಧೆಗೆ ಸೋಂಕು ಹರಡಿರುವ ಶಂಕೆ ವ್ಯಕ್ತವಾಗುತ್ತಿದೆ. ಮೃತಪಟ್ಟ ಮಹಿಳೆಯ ನೆರೆ ಮನೆಯಲ್ಲೇ ಈ ವೃದ್ಧೆ ವಾಸವಾಗಿದ್ದರು ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಕೊರೊನಾಗೆ ದಕ್ಷಿಣ ಕನ್ನಡದಲ್ಲಿ ಮೊದಲ ಬಲಿ – ಬಂಟ್ವಾಳ ಮೂಲದ ಮಹಿಳೆ ಸಾವು
Advertisement
ಸದ್ಯ ವೃದ್ಧೆಗೆ ವೆನ್ ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಇದರಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ. 12 ಮಂದಿ ಗುಣಮುಖರಾಗಿ ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ನರಕದಿಂದ ನಮ್ಮನ್ನು ಹೊರ ತರಲು ಕಷ್ಟ ಪಡ್ತಿರೋರಿಗೆ ನಾವು ಸಹಕರಿಸೋಣ – ಗುಣಮುಖವಾಗಿ ಕಣ್ಣೀರಿಟ್ಟ