ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಕಡಿಮೆಯಿದೆ. ಅದಕ್ಕೆ ಮೊದಲು ಅದನ್ನು ಹೆಚ್ಚಿಸಬೇಕು ಎಂದು ಮಂಗಳೂರು ಕಮಿಷನರ್ ಕಚೇರಿಯಲ್ಲಿ ಡಿಜಿಪಿ ಪ್ರವೀಣ್ ಸೂದ್ ತಿಳಿಸಿದರು.
ಮಂಗಳೂರು ಕೊಲೆ ಪ್ರಕರಣಗಳ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಹತ್ತು ದಿನಗಳಲ್ಲಿ ಮೂರು ಕೊಲೆ ಪ್ರಕರಣಗಳು ನಡೆದಿವೆ. ಮಸೂದ್ ಕೊಲೆ ಪ್ರಕರಣಲ್ಲಿ ಎಂಟು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದೇವೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಇಬ್ಬರು ಅರೆಸ್ಟ್ ಆಗಿದ್ದಾರೆ. ತನಿಖೆ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ಉಳಿದ ಆರೋಪಿಗಳನ್ನು ಪತ್ತೆ ಮಾಡುತ್ತೇವೆ. ಅವರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಭರವಸೆ ಕೊಟ್ಟರು. ಇದನ್ನೂ ಓದಿ: ಸುರತ್ಕಲ್ ಫಾಜಿಲ್ ಹತ್ಯೆ ಕೇಸಲ್ಲಿ ನಾಲ್ವರು ಭಾಗಿ ಶಂಕೆ
ಗಡಿಪ್ರದೇಶದಲ್ಲಿ ತಪಾಸಣೆ ಜಾಸ್ತಿ ಮಾಡಬೇಕು. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಕಡಿಮೆಯಿದೆ. ಅದನ್ನು ಸ್ವಲ್ಪ ಹೆಚ್ಚು ಮಾಡಬೇಕು ಎಂದು ಸರ್ಕಾರದ ಕಡೆಯಿಂದ ಚರ್ಚೆ ಮಾಡುತ್ತಿದ್ದೇವೆ ಎಂದು ವಿವರಿಸಿದರು.
ಫಾಝಿಲ್ ಪ್ರಕರಣದಲ್ಲಿ ಮಹತ್ವದ ಸುಳಿವು ಸಿಕ್ಕಿದೆ. ಕೃತ್ಯಕ್ಕೆ ಬಳಸಿದ ಕಾರು ಸಿಕ್ಕಿದ್ದು, ಮಾಲೀಕನನ್ನು ಬಂಧಿಸಿದ್ದೇವೆ. ಅವರ ಮೂಲಕ ಉಳಿದ ಅಪರಾಧಿಗಳನ್ನು ಸದ್ಯದಲ್ಲೇ ಬಂಧಿಸುತ್ತೇವೆ. ನಾನು ಇಂದು ಕಮಿಷನರ್, ಎಸ್‍ಪಿ, ಐಜಿ ಜೊತೆ ಸಭೆ ಮಾಡುತ್ತೇನೆ ಎಂದರು. ಇದನ್ನೂ ಓದಿ: ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ- ಮತ್ತಿಬ್ಬರು ಪೊಲೀಸರ ವಶಕ್ಕೆ
ಮುಂದೆ ಇಂತಹ ಘಟನೆಗಳು ಆಗಬಾರದು. ಏನೇನು ಕ್ರಮ ತೆಗೆದುಕೊಳ್ಳಬೇಕು ಅದರ ಬಗ್ಗೆ ಸುಧೀರ್ಘವಾಗಿ ಚರ್ಚೆ ಮಾಡ್ತಿನಿ. ಡಿಸಿ ಅವರ ಜೊತೆಯೂ ಮಾತನಾಡುತ್ತೀನಿ. ಏನೇನು ಕ್ರಮ ತೆಗೆದುಕೊಳ್ಳುತ್ತೀವಿ ಎಂದು ಈಗಾಗಲೇ ಸಿಎಂ ಬೊಮ್ಮಾಯಿ ಅವರಿಗೆ ಹೇಳಿದ್ದೇವೆ ಎಂದು ಹೇಳಿದರು.